ಹುಲಿಕಲ್ ಘಾಟ್‌ನಲ್ಲಿ ಭೀಕರ ದುರಂತ: ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಸಾವು

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ  ಹುಲಿಕಲ್‌ ಘಾಟ್‌ನಲ್ಲಿ (ಬಾಳೇಬರೆ) ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ  ಕುಸಿತ (landslide) ಸಂಭವಿಸಿ ಮೂವರು ಕಾರ್ಮಿಕರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
 ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘವೇಂದ್ರ (37), ಕಾರ್ಮಿಕರಾದ ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಹಾಗೂ ಶಬ್ಬೀರ್(40) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
 ಕುಂದಾಪುರ-ಶಿವಮೊಗ್ಗವನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಹುಲಿಕಲ್ ಘಾಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆ ವಿಸ್ತರಣೆ ಮತ್ತು ಸುರಕ್ಷತಾ ತಡೆಗೋಡೆ ನಿರ್ಮಾಣದ ಕೆಲಸ ಪ್ರಗತಿಯಲ್ಲಿತ್ತು. ಗುರುವಾರ ಸಂಜೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ, ಮೇಲ್ಭಾಗದಿಂದ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಕುಸಿದು ಬಿದ್ದಿವೆ.   ಮಣ್ಣಿನ ಅಡಿಯಲ್ಲಿ ಸಿಲುಕಿ ಕಾಮಗಾರಿ ಮೇಲ್ವಿಚಾರಕ ನಗರ ನಿವಾಸಿ ರಾಘವೇಂದ್ರ ಹಾಗೂ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಇತರ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರ ಮತ್ತು ಹೊಸನಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹ ಹೊರತೆಗೆಯುವ ಕೆಲಸವನ್ನು  ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement