ನಾಗ್ಪುರ : ಆರ್‌ಎಸ್‌ಎಸ್ ಸ್ಥಾಪಕ ಹೆಡ್ಗೇವಾರ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ ಬಾಲಿವುಡ್‌ ನಟ ರಣವೀರ ಸಿಂಗ್

ನಾಗ್ಪುರ: ಬಾಲಿವುಡ್‌ನ ಖ್ಯಾತ ನಟ ರಣವೀರ ಸಿಂಗ್ ಅವರು ಶುಕ್ರವಾರ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಪ್ರಮುಖ ಸ್ಥಳವಾದ ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಇತ್ತೀಚಿನ ಚಿತ್ರ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ರಣವೀರ್ ಅವರ ಈ ಭೇಟಿ ಕುತೂಹಲ ಮೂಡಿಸಿದೆ.
ಮೂಲಗಳ ಪ್ರಕಾರ, ರಣವೀರ ಸಿಂಗ್ ಅವರು ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ಸಂಘದ ಮುಖ್ಯಸ್ಥರಾದ (ಸರ್ಸಂಘಚಾಲಕ) ಮೋಹನ ಭಾಗವತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಭೆಯ ನಿರ್ದಿಷ್ಟ ಉದ್ದೇಶ ಅಥವಾ ಚರ್ಚಿತ ವಿಷಯಗಳು ಬಹಿರಂಗವಾಗಿಲ್ಲದಿದ್ದರೂ, ರಣವೀರ ಅಂತಹ ಹೆಸರಾಂತ ನಟನ ಭೇಟಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದೆ.

ಸ್ಮೃತಿ ಮಂದಿರದಲ್ಲಿ ಗೌರವ ಸಲ್ಲಿಕೆ
ಶುಕ್ರವಾರ ಸಂಜೆ ಸುಮಾರು 4 ಗಂಟೆಗೆ ಮುಂಬೈನಿಂದ ಚಾರ್ಟರ್ಡ್ ಫ್ಲೈಟ್ ಮೂಲಕ ನಾಗ್ಪುರಕ್ಕೆ ಬಂದಿಳಿದ ರಣವೀರ ಸಿಂಗ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಹಿರಿಯ ಪದಾಧಿಕಾರಿಗಳೊಂದಿಗೆ ಅವರು ಸುದೀರ್ಘವಾಗಿ ಮಾತನಾಡಿದ್ದಾರೆ ಎನ್ನಲಾಗಿದೆ. ಆದರೆ, ಈ ಭೇಟಿಯ ಬಗ್ಗೆ ಆರ್‌ಎಸ್‌ಎಸ್ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ಇತ್ತೀಚೆಗಷ್ಟೇ ಜಾಮ್‌ನಗರದಲ್ಲಿ ನಡೆದ ಅನಂತ್ ಅಂಬಾನಿ ಅವರ ಅದ್ಧೂರಿ ಜನ್ಮದಿನದ ಪಾರ್ಟಿಯಲ್ಲಿ ಭಾಗವಹಿಸಿದ್ದ ರಣವೀರ ಸಿಂಗ್, ಈ ಕಾರ್ಯಕ್ರಮದ ಬೆನ್ನಲ್ಲೇ ಅವರು ನಾಗ್ಪುರಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ
ರಣವೀರ್ ಸಿಂಗ್ ನಟನೆಯ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.
ಈ ಚಿತ್ರದಲ್ಲಿ ರಣವೀರ್ ಅವರೊಂದಿಗೆ ಅರ್ಜುನ ರಾಮಪಾಲ, ಆರ್. ಮಾಧವನ್, ಸಂಜಯ ದತ್, ರಾಕೇಶ ಬೇಡಿ ಮತ್ತು ಸಾರಾ ಅರ್ಜುನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ನಿರ್ದೇಶಕ ಆದಿತ್ಯ ಧರ್ ಅವರ ಪತ್ನಿ ಯಾಮಿ ಗೌತಮ್ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement