ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದ ವಿಶೇಷ ನ್ಯಾಯಾಲಯ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿದ್ದು ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16  ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ.
2016ರ ಜೂನ್ 15ರಂದು ನಡೆದ ಯೋಗೇಶ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು, ಬುಧವಾರ ತೀರ್ಪು ಪ್ರಕಟಿಸಿದ್ದು,  ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16  ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಎಲ್ಲ ಅಪರಾಧಿಗಳನ್ನು ವಶಕ್ಕೆ ಪಡೆದು, ಜೈಲಿಗೆ ಕಳುಹಿಸುವಂತೆ ಸಿಬಿಐಗೆ ನ್ಯಾಯಾಲಯ ನಿರ್ದೇಶಿಸಿದೆ.
ಏಪ್ರಿಲ್‌ 2ರಂದು ಕಾಯ್ದಿರಿಸಿದ್ದ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ಪ್ರಕಟಿಸಿದ್ದು, ಸುಳ್ಳು ಸಾಕ್ಷಿ ಹೇಳಿದ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು ನಿರ್ದೇಶಿಸಿದೆ.   ಪ್ರಕರಣದ ಇಬ್ಬರು ಆರೋಪಿಗಳನ್ನು ಬಿಡುಗಡೆ ಮಾಡಲು ಕೋರ್ಟ್ ಆದೇಶಿಸಿದೆ.
 ಎಲ್ಲಾ ಅಪರಾಧಿಗನ್ನು ತಕ್ಷಣ ವಶಕ್ಕೆ ಪಡೆದು, ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಕಳುಹಿಸುವಂತೆ ಸಿಬಿಐಗೆ ನ್ಯಾಯಾಲಯ ನಿರ್ದೇಶಿಸಿದ್ದು, ಗುರುವಾರ ಶಿಕ್ಷೆಯ ಪ್ರಮಾಣ ನಿಗದಿಪಡಿಸಲು ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: 2016ರ ಜೂನ್‌ 15ರಂದು ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯೋಗೇಶ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್120(B) ಜೊತೆಗೆ 302, 217, 201, 143, 147, 148 ಜೊತೆಗೆ 149, ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 25 ಜೊತೆಗೆ 3, 5, 8, 29 ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 13(2) ಜೊತೆಗೆ 13(1)(d) ಅಡಿ ಆರೋಪ ಪಟ್ಟಿ ಸಲ್ಲಿಸಿತ್ತು.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement