180 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; 350 ವೀಡಿಯೊ ಚಿತ್ರೀಕರಿಸಿ ವೈರಲ್‌ ; ಆರೋಪಿಯ ಬಂಧನ

ಮುಂಬೈ: ಕನಿಷ್ಠ 180 ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಶೋಷಿಸಿ, ಅವರ 350ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿದ್ದ ಆರೋಪಿಯನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಬಂಧಿಸಲಾಗಿದೆ. ಬಿಜೆಪಿ ಸಂಸದರೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಪರತವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ (ಅಲಿಯಾಸ್ ತನ್ವೀರ್) ಎಂಬಾತ ಬಾಲಕಿಯರನ್ನು “ಪ್ರೀತಿಯ ಜಾಲ”ಕ್ಕೆ (ಲವ್ ಟ್ರ್ಯಾಪ್) ಬೀಳಿಸುತ್ತಿದ್ದ ಎನ್ನಲಾಗಿದೆ. ಬಾಲಕಿಯರನ್ನು ಮುಂಬೈ ಮತ್ತು ಪುಣೆಗೆ ಕರೆದೊಯ್ದು ಅವರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಬ್ಲ್ಯಾಕ್‌ಮೇಲ್ ಮತ್ತು ವೇಶ್ಯಾವಾಟಿಕೆ
ಈ ವೀಡಿಯೊಗಳನ್ನು ಬಳಸಿಕೊಂಡು ಬಾಲಕಿಯರನ್ನು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿತ್ತು ಮತ್ತು ಅವರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಕೆಲವು ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ವಾಟ್ಸಾಪ್ ಮತ್ತು ಸ್ನ್ಯಾಪ್‌ಚಾಟ್ ಗ್ರೂಪ್‌ಗಳ ಮೂಲಕ ಅಪ್ರಾಪ್ತ ಬಾಲಕಿಯರನ್ನು ವ್ಯವಸ್ಥಿತವಾಗಿ ಗುರಿಪಡಿಸಲಾಗುತ್ತಿತ್ತು ಎಂದು ರಾಜ್ಯಸಭಾ ಸಂಸದ ಅನಿಲ ಬೋಂಡೆ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮಾಂತರ) ವಿಶಾಲ ಆನಂದ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.
“ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸದಿದ್ದರೆ ಬುಧವಾರ ಬೆಳಿಗ್ಗೆ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಸಂಸದ ಅನಿಲ ಬೋಂಡೆ ಎಚ್ಚರಿಕೆ ನೀಡಿದ್ದಾರೆ.”

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

ಮುಸ್ಲಿಂ ಸಮುದಾಯದ ಹಲವರು ಸಹ ಪೊಲೀಸ್ ಠಾಣೆಗೆ ಭೇಟಿ ನೀಡಿ, ಇಂತಹ ಕೃತ್ಯಗಳಿಂದ ಸಮುದಾಯದ ಗೌರವಕ್ಕೆ ಧಕ್ಕೆ ಬರುತ್ತದೆ, ಆದ್ದರಿಂದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಪೊಲೀಸರು ಅಯಾಜ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಆತನ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಹಲವಾರು ಆಕ್ಷೇಪಾರ್ಹ ವೀಡಿಯೊಗಳು ಪತ್ತೆಯಾಗಿವೆ. ಸೈಬರ್ ಸೆಲ್ ಸಹಾಯದೊಂದಿಗೆ ಈ ವೀಡಿಯೊಗಳನ್ನು ಬೇರೆ ಯಾರಿಗಾದರೂ ಅಥವಾ ಕ್ರಿಮಿನಲ್ ಗ್ಯಾಂಗ್‌ಗಳಿಗೆ ಹಂಚಲಾಗಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement