ಸೊಳ್ಳೆ ಪರದೆಯೊಳಗೆ ಕುಳಿತು ರಾತ್ರಿ ಕಾವಲು : ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾದ ಭದ್ರತಾ ಸಿಬ್ಬಂದಿ ವೈರಲ್‌ ವಿಡಿಯೋ

ಹೈದರಾಬಾದ್‌ನಿಂದ ಬಂದಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಸತಿ ಸಮುಚ್ಚಯಗಳಲ್ಲಿ (Residential Societies) ಕೆಲಸ ಮಾಡುವ ಭದ್ರತಾ ಸಿಬ್ಬಂದಿ ಎದುರಿಸುತ್ತಿರುವ ಕಠಿಣ ಪರಿಸ್ಥಿತಿಯನ್ನು ಈ ವಿಡಿಯೋ ಎತ್ತಿ ತೋರಿಸುತ್ತಿದೆ.
ಸೂರಜಕುಮಾರ ಬೌದ್ಧ ಎಂಬವರು ‘X’ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ, ರಾತ್ರಿ ಪಾಳಿಯಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳ ಕಾಟದಿಂದ ತಪ್ಪಿಸಿಕೊಳ್ಳಲು ಸೊಳ್ಳೆ ಪರದೆಯನ್ನೇ ಮೈಮೇಲೆ ಹೊದ್ದುಕೊಂಡು ಕುರ್ಚಿಯ ಮೇಲೆ ಕುಳಿತು ಕರ್ತವ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ. ಆ ಸಮಯದಲ್ಲಿ ಮಹಿಳೆಯೊಬ್ಬರು ಅವರೊಂದಿಗೆ ಮಾತನಾಡುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತದೆ. ಅಂತಹ ಇಕ್ಕಟ್ಟಿನ ಸ್ಥಿತಿಯಲ್ಲೂ ಅವರು ಎಚ್ಚರವಾಗಿದ್ದುಕೊಂಡು ತನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ವಿಡಿಯೋ ಹಂಚಿಕೊಂಡ ಸೂರಜಕುಮಾರ, “ಸಮುಚ್ಚಯದ ನಿವಾಸಿಗಳು ಎಸಿ (AC) ರೂಮ್‌ಗಳಲ್ಲಿ ಆರಾಮವಾಗಿ ಮಲಗುತ್ತಾರೆ. ಆದರೆ ಅವರಿಗೆ ರಕ್ಷಣೆ ನೀಡುವ ಕಾವಲುಗಾರರಿಗೆ ಕನಿಷ್ಠ ಸುರಕ್ಷಿತ ಮತ್ತು ಆರಾಮದಾಯಕವಾದ ಸ್ಥಳವನ್ನು ನೀಡಲು ಸಾಧ್ಯವಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ. “ಜನರಲ್ಲಿ ಸಹಾನುಭೂತಿಯ ಕೊರತೆಯೇ ಇಂದಿನ ಮುಖ್ಯ ಸಮಸ್ಯೆ. ಜನರ ಕಷ್ಟದ ಪರಿಸ್ಥಿತಿಯ ಬಗ್ಗೆ ಜನರಿಗೆ ಮೊದಲಿನಂತೆ ಈಗ ಸಂವೇದನಾಶೀಲತೆ ಉಳಿದಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ:
ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಕಿಡಿಕಾರಿದ್ದಾರೆ. ಒಬ್ಬ ಬಳಕೆದಾರರೊಬ್ಬರು “ಇದು ಕೇವಲ ಕರ್ತವ್ಯವಲ್ಲ, ಇದು ಆಧುನಿಕ ಗುಲಾಮಗಿರಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬರು “ಇದು ನಿಜಕ್ಕೂ ಹೃದಯ ವಿದ್ರಾವಕವಾಗಿದೆ ” ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು “ಈ ಭದ್ರತಾ ಸಿಬ್ಬಂದಿಗಳ ಯೋಗಕ್ಷೇಮದ ಜವಾಬ್ದಾರಿ ಆಯಾ ಸೊಸೈಟಿ ಮ್ಯಾನೇಜ್‌ಮೆಂಟ್‌ಗಳ ಮೇಲಿರುತ್ತದೆ. ಆದರೆ ಅವರು ಈ ಬಗ್ಗೆ ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ. ಒಟ್ಟಿನಲ್ಲಿ, ಈ ವಿಡಿಯೋ ಮರೆಯಾಗುತ್ತಿರುವ ಮಾನವೀಯತೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಪ್ರಮುಖ ಸುದ್ದಿ :-   8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು...

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement