ಮಡಿಕೇರಿ: ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೃತ ಶಿಕ್ಷಕಿಯನ್ನು ಚೇರಂಬಾಣೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎ. ರೋಹಿಣಿ(51) ಎಂದು ಗುರುತಿಸಲಾಗಿದೆ.
ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ