ಬೈಂದೂರು : ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ ; ಇಬ್ಬರು ಸಾವು, ಹಲವರಿಗೆ ಗಾಯ

ಉಡುಪಿ:  ಟ್ಯಾಂಕರ್‌ ಹಾಗೂ ಪ್ರವಾಸಿ ಬಸ್‌ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Udupi Bus Accident) ಬೈಂದೂರು ತಾಲೂಕಿನ ತ್ರಾಸಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.
ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕಾಗಿ ಬಂದಿದ್ದು, ಮುರುಡೇಶ್ವರದಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement