ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ ದಾಳಿಯಿಂದ ಗಾಯಗೊಂಡ ಆನಂದ ಕಿರುಚಾಡುವುದನ್ನು ಕೇಳಿಸಿಕೊಂಡ ಸ್ಥಳೀಯರು ತಕ್ಷಣವೇ ಆಗಮಿಸಿ ಮೊಸಳೆಯನ್ನು ಓಡಿಸಿದ್ದಾರೆ. ಅವರು ಕಾಲ ಹಾಗೂ ದೇಹದ ಕೆಲವಡೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ನಗರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ಒಯ್ಯಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್‌ ಸಿಬ್ಬಂದಿ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement