ಚಿಕ್ಕಮಗಳೂರು : ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ (8) ಎಂದು ಗುರುತಿಸಲಾಗಿದೆ. ಅರಳುಗುಪ್ಪೆಯ 4 ವರ್ಷದ ಮಗು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆರೆ ಪಾತ್ರದಲ್ಲಿ ಮಕ್ಕಳು ಆಟವಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಆಟವಾಡುತ್ತಿದ್ದಾಗ ಅವರೊಂದಿಗೆ ಇದ್ದ ಬಾತುಕೋಳಿ ನೀರಿಗೆ ಇಳಿದಿದೆ ಎಂದು ಅದನ್ನು ಹಿಡಿಯಲು ಹೋದ ಬಾಲಕಿ ನೀರಿಗೆ ಬಿದ್ದಿದ್ದಾಳೆ. ಬಾಲಕಿಯನ್ನು ರಕ್ಷಿಸಲು ಹೋದ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ