ಯಲ್ಲಾಪುರ : ಮದುವೆಯಿಂದ ವಾಪಸ್‌ ಬರುವಾಗ ಮಿನಿ ಬಸ್‌ ಅಪಘಾತ ; ಹಲವರಿಗೆ ಗಾಯ

ಕಾರವಾರ: ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್‌ ಅಪಘಾತಕ್ಕೀಡಾಗಿ 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೆಳಗಾವಿಯಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಮುಗಿಸಿ ವಾಪಸ್‌ ಆಗುವಾಗ ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದ ತಿರುವುಗಳಲ್ಲಿ ಅವರಿದ್ದ ಮಿನಿ ಬಸ್‌ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ.
ಬಸ್ ಅರಬೈಲ್ ಘಟ್ಟದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ರಸ್ತೆ ಬದಿಯ ಗುಡ್ಡಕ್ಕೆ ಅಪ್ಪಳಿಸಿದೆ.  ಅರೆಬೈಲ್‌ ಗ್ರಾಮದಲ್ಲಿರುವ ಅವರ ಮನೆ ತಲುಪಲು ಕೇವಲ 2 ಕಿ.ಮೀ ಮಾತ್ರ ಇರುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೆಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

5 / 5. 3

ನಿಮ್ಮ ಕಾಮೆಂಟ್ ಬರೆಯಿರಿ

advertisement