ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಮಳೆ ಮುನ್ಸೂಚನೆ

ಬೆಂಗಳೂರು: ಮೇ 11ರಿಂದ  ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಶಿವಮೊಗ್ಗದಲ್ಲಿ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಬಲವಾದ ಗಾಳಿ ಬೀಸಲಿದ್ದು, ತೀವ್ರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ನಿರೀಕ್ಷೆಯಿದೆ. ಮೇ 11ರಿಂದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದೆ ಎಂದು ಅಂದಾಜಿಸಲಾಗಿದೆ. ಮೇ 13ರಿಂದ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಗದಗ ಮತ್ತು ಹಾವೇರಿ ಭಾಗಗಳಲ್ಲಿ ಚದುರಿದ ಮಳೆಯ ವಾತಾವರಣ ಮುಂದುವರಿಯಬಹುದು ಎಂದು ವರದಿ ತಿಳಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement