ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿಭತ್ಯೆ (DA) ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಜಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (DA) ಹೆಚ್ಚಳ ಮಾಡಿದೆ. ಜ.1, 2026ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ.
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ. ಪ್ರಸ್ತುತ ಮೂಲ ವೇತನದ ಶೇಕಡಾ 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದೆ. ಏಪ್ರಿಲ್​​ನಲ್ಲಿ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ.2 ರಷ್ಟು ದಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ. 1.50 ರಷ್ಟು ಡಿಎ ಹೆಚ್ಚಳ ಮಾಡಿ ಆದೇಶಿಸಿದೆ.

ಈ ತುಟ್ಟಿ ಭತ್ಯೆ ಹೆಚ್ಚಳ ಆದೇಶವು ಕೇವಲ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರವಲ್ಲದೆ, ರಾಜ್ಯ ಸರ್ಕಾರದ ನಿವೃತ್ತ ವೇತನದಾರರು ಮತ್ತು ಕುಟುಂಬ ನಿವೃತ್ತ ವೇತನದಾರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ನೌಕರರು, ಯುಜಿಸಿ (UGC), ಎಐಸಿಟಿಇ (AICTE), ಐಸಿಎಆರ್ (ICAR) ವೇತನ ಶ್ರೇಣಿಯ ನಿವೃತ್ತ ನೌಕರರು, ಜಿಲ್ಲಾ ಪಂಚಾಯತಗಳ ಪೂರ್ಣಾವಧಿ ನೌಕರರು, ಪೂರ್ಣಾವಧಿ ಕೆಲಸ ಮಾಡುವ ವರ್ಕ್‌ಚಾರ್ಜ್ ನೌಕರರು, ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಪೂರ್ಣಾವಧಿ ನೌಕರರಿಗೂ ಅನ್ವಯವಾಗಲಿದೆ.

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ಈ ಪರಿಷ್ಕೃತ ತುಟ್ಟಿಭತ್ಯೆಯು 2026ರ ಜನವರಿ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ. ಈ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದು ರೂಪದಲ್ಲೇ ಪಾವತಿಸಲಾಗುತ್ತದೆ. ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುತ್ತದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement