ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ 3ನೇ ಹಂತದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR)

ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶಕುಮಾರ (Gyanesh Kumar) ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಹಂತ-3 ಅಭಿಯಾನವು ಸುಮಾರು 36 ಕೋಟಿ ಮತದಾರರನ್ನು ಒಳಗೊಂಡಿರಲಿದೆ. ಪ್ರಸ್ತುತ ನಡೆಯುತ್ತಿರುವ ಜನಗಣತಿಯ ಮನೆ ಪಟ್ಟಿ ಪ್ರಕ್ರಿಯೆಯೊಂದಿಗೆ ಇದನ್ನು ಸಂಯೋಜಿಸಲಾಗಿದ್ದು, ಕ್ಷೇತ್ರ ಸಿಬ್ಬಂದಿಯ ಬಳಕೆಯನ್ನು ಪರಿಣಾಮಕಾರಿಯಾಗಿ ಮಾಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ.

ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ, ಕೇಂದ್ರಾಡಳಿತ ಪ್ರದೇಶ ಲಡಾಕ್ ಅನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಈ ಹಂತದ ಪರಿಷ್ಕರಣೆ ನಡೆಯಲಿದೆ. ಹಿಮ ಪ್ರದೇಶಗಳಲ್ಲಿ ಹವಾಮಾನ ಪರಿಸ್ಥಿತಿ ಹಾಗೂ ನಡೆಯುತ್ತಿರುವ ಜನಗಣತಿ ಕಾರ್ಯಗಳ ಹಿನ್ನೆಲೆಯಲ್ಲಿ ಆ ಪ್ರದೇಶಗಳ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಅಭಿಯಾನವು ದೆಹಲಿ, ಒಡಿಶಾ, ಮಿಜೋರಾಂ, ಸಿಕ್ಕಿಂ, ಉತ್ತರಾಖಂಡ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಹರ್ಯಾಣ, ಚಂಡೀಗಢ, ತೆಲಂಗಾಣ, ಪಂಜಾಬ್, ಕರ್ನಾಟಕ, ಮೇಘಾಲಯ, ಮಹಾರಾಷ್ಟ್ರ, ಜಾರ್ಖಂಡ್, ನಾಗಾಲ್ಯಾಂಡ್, ತ್ರಿಪುರಾ ಹಾಗೂ ದಾದ್ರಾ ಮತ್ತು ನಗರ್ ಹವೇಲಿ, ಡಿಯು ಡಾಮುನ್ ಸೇರಿವೆ.  .

ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಈ ಹಂತದಲ್ಲಿ 3.94 ಲಕ್ಷಕ್ಕಿಂತ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು (BLOs) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಇದಕ್ಕೂ ಮೊದಲು ನಡೆದ ಮೊದಲ ಎರಡು ಹಂತಗಳಲ್ಲಿ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 59 ಕೋಟಿಗೂ ಹೆಚ್ಚು ಮತದಾರರನ್ನು ಒಳಗೊಂಡ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿತ್ತು. ಅದರಲ್ಲಿ 6.3 ಲಕ್ಷಕ್ಕೂ ಹೆಚ್ಚು ಬೂತ್ ಮಟ್ಟದ ಅಧಿಕಾರಿಗಳು ಹಾಗೂ 9.2 ಲಕ್ಷ ಬಿಎಲ್‌ಎಗಳು (BLAs) ಸಹಕರಿಸಿದ್ದರು ಎಂದು ಆಯೋಗ ತಿಳಿಸಿದೆ.
ಈ ಅಭಿಯಾನದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ಪರಿಷ್ಕರಣೆಯ ಉದ್ದೇಶ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವಂತೆ ಮಾಡುವುದು ಮತ್ತು ಅನರ್ಹ ಹೆಸರುಗಳನ್ನು ತೆಗೆದುಹಾಕುವುದು ಎಂದು ಅವರು ತಿಳಿಸಿದ್ದಾರೆ.

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement