ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಶಿಕ್ಷಕಿ ಸಾವು

ಕಾರವಾರ: ಸ್ಕೂಟಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ(siddapur) ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.
ಮೃತ ಶಿಕ್ಷಕಿಯನ್ನು ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (HPS ಹೊಸೂರು) ಸಹ-ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರು ಜನಗಣತಿ ಕಾರ್ಯದ ಮಾಹಿತಿ ನೀಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶಿರಸಿ ಕಡೆಯಿಂದ ಸಿದ್ದಾಪುರದತ್ತ ಕಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್, ಪೂರ್ಣಿಮಾ ಅವರು ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ, ಗಂಭೀರ ಗಾಯಗಳಿಂದ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement