ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಟ್ರೇಡ್‌ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಬುಧವಾರ (ಮೇ 20)ರಿಂದ ಕರೆದಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ.
ವಿವಿಧ ಯೂನಿಯನ್‌ಗಳ ನೇತೃತ್ವ ವಹಿಸಿರುವ ಜಂಟಿ ಕ್ರಿಯಾ ಸಮಿತಿಯು 29.04.2026ರ ನೋಟಿಸ್‌ ಆಧರಿಸಿ ಮುಷ್ಕರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಪೀಠ ಆದೇಶಿಸಿತು.
ಮುಷ್ಕರ ಪ್ರಶ್ನಿಸಿ ಮನೆಕೆಲಸ ಮಾಡುತ್ತಿರುವ ಬೆಂಗಳೂರಿನ ಸಿ ವೇದಾವತಿ ಹಾಗೂ ಕಟ್ಟಡ ಕಾರ್ಮಿಕ ಎಚ್‌. ವಿ. ಶ್ರೀಧರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರಜ ಗೋವಿಂದರಾಜ ಮತ್ತು ಡಾ. ಕೆ. ಮನ್ಮಥ ರಾವ್‌ ಅವರಿದ್ದ ವಿಭಾಗೀಯ ಪೀಠವು ನಿರ್ಬಂಧ ವಿಧಿಸಿ ಆದೇಶಿಸಿದೆ.
ಸಾರಿಗೆ ಸಚಿವರು ಮತ್ತು ಅಥವಾ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಯಾವಾಗ ಜಂಟಿ ಕ್ರಿಯಾ ಸಮಿತಿಯ ಜೊತೆ ಸಭೆ ನಡೆಸಲಾಗುತ್ತದೆ ಎಂಬುದಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಸೂಚನೆ ಪಡೆದು ವಾದಿಸಲು ಎರಡು ದಿನ ಕಾಲಾವಕಾಶ ಕೋರಿದ್ದಾರೆ” ಎಂದು ಹೇಳಿದ ಪೀಠವು ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಈ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ (JAC) ಕರೆ ನೀಡಿತ್ತು. ಇದರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮೆಟ್ರಾಪಾಲಿಟನ್ ಸಾರಿಗೆ ನಿಗಮ (BMTC), ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (NWKRTC) ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ (KKRTC) ನೌಕರರ ಸಂಘಗಳು ಸೇರಿದ್ದವು. ಬಾಕಿ ವೇತನ ಪಾವತಿ ಹಾಗೂ ವೇತನ ಹೆಚ್ಚಳದ ಬೇಡಿಕೆ ಈಡೇರದಿದ್ದರೆ ಮೇ 20ರಿಂದ ನಾಲ್ಕು ರಾಜ್ಯ ಸಾರಿಗೆ ನಿಗಮಗಳ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕಾರ್ಮಿಕ ಸಂಘಗಳು ಎಚ್ಚರಿಕೆ ನೀಡಿದ್ದವು.
ಕೆಎಸ್‌ಆರ್‌ಟಿ ಸಿಬ್ಬಂದಿಯ ಟ್ರೇಡ್‌ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಪರ ವಕೀಲ ಕ್ಲಿಫ್ಟನ್‌ ಡಿ ರೋಜಾರಿಯೋ “ನಮ್ಮ ಬೇಡಿಕೆಗಳನ್ನು ಸರಿಯಾಗಿ ಈಡೇರಿಸಿಲ್ಲ. ಕಾನೂನಿನ ಪ್ರಕಾರವೇ ಮುಷ್ಕರ ನಡೆಸಲು ನೋಟಿಸ್‌ ನೀಡಲಾಗಿದೆ. ಅದನ್ನು ಪರಿಗಣಿಸದೇ ಸರ್ಕಾರವೇ ಈ ಸಂದರ್ಭ ನಿರ್ಮಾಣ ಮಾಡಿದೆ” ಎಂದು ವಾದಿಸಿದರು.
ಸಂಘದ ಪ್ರತಿನಿಧಿಗಳು, ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳ ನಡುವಿನ ಸಭೆ ಯಾವಾಗ ನಡೆಯಬಹುದು ಎಂಬ ಬಗ್ಗೆ ಸೂಚನೆ ಪಡೆಯಲು ಹೆಚ್ಚುವರಿ ಎರಡು ದಿನಗಳ ಕಾಲಾವಕಾಶ ಬೇಕು ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಕೋರಿದರು. ಇದನ್ನು ಆಲಿಸಿದ ಪೀಠವು ಮುಖ್ಯಮಂತ್ರಿ ಅಥವಾ ಸಾರಿಗೆ ಸಚಿವರು, ಸಾರಿಗೆ ಇಲಾಖೆ ಕಾರ್ಯದರ್ಶಿಯು ಜಂಟಿ ಕ್ರಿಯಾ ಸಮಿತಿ ಜೊತೆಗೆ ಯಾವಾಗ ಸಭೆ ನಡೆಸುತ್ತಿದೆ ಎಂಬುದನ್ನು ಗುರುವಾರದ ವಿಚಾರಣೆಯ ವೇಳೆ ತಿಳಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆ ಮುಂದೂಡಿತು.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement