ಕಲಬುರಗಿ : ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಇತ್ತೀಚೆಗಷ್ಟೇ ನಡೆದಿದ್ದ ನೀಟ್ (NEET)  ಪರೀಕ್ಷೆ ಬರೆದಿದ್ದ ವಿದ್ಯಾರ್ಥನಿ ಆತ್ಮಹತ್ಯೆ ಮಾಡಿಕೊಂಡ ಧೃತಿಗೆಡಿಸುವ ಘಟನೆ ಕಲಬುರಗಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಕಲಬುರಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಭಾಗ್ಯಶ್ರೀ ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ (PUC) ಪರೀಕ್ಷೆಯಲ್ಲಿ ಶೇಕಡಾ 92 ರಷ್ಟು ಅಂಕ ಗಳಿಸಿ ಉತ್ತೀರ್ಣರಾಗಿದ್ದರು. ಮೇ 2 ರಂದು ನಡೆದಿದ್ದ ನೀಟ್ ಪರೀಕ್ಷೆಗೂ ಇವರು ಹಾಜರಾಗಿದ್ದರು. ದರೆ, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement