ಕರ್ನಾಟಕದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಜೂನ್ 30ಕ್ಕೆ ಅವಧಿ ಮುಕ್ತಾಯವಾಗುವ ಏಳು ಸದಸ್ಯರ ಸ್ಥಾನಗಳಿಗೆ ಜೂನ್ 18ಕ್ಕೆ ಮತದಾನ ನಡೆಸಲು ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಸದಸ್ಯರಾದ ಗೋವಿಂದ ರಾಜು, ನಸೀರ್ ಅಹ್ಮದ್, ತಿಪ್ಪಣ್ಣಪ್ಪ ಮತ್ತು ಬಿ ಕೆ ಹರಿಪ್ರಸಾದ್, ಬಿಜೆಪಿ ಸದಸ್ಯರಾದ ಎನ್ ನಾಗರಾಜು(ಎಂಟಿಬಿ), ಪ್ರತಾಪ್ ಸಿಂಹ ನಾಯಕ್ ಕೆ ಮತ್ತು ಸುನಿಲ್ ವಲ್ಲ್ಯಾಪುರ ಅವರ ಅವಧಿ ಜೂನ್ 30 ರಂದು ಮುಕ್ತಾಯಗೊಳ್ಳಲಿದೆ. ( Karnataka Councli Election )

ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಜೂನ್ 1ರಂದು ಅಧಿಸೂಚನೆ ಹೊರಡಿಸಲಿದ್ದು, ಜೂನ್ 8ಕ್ಕೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಹಾಗೂ ಜೂನ್‌ 9ಕ್ಕೆ ನಾಮಪತ್ರಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜೂನ್‌ 11 ಕೊನೆಯ ದಿನವಾಗಿದ್ದು, 18ಕ್ಕೆ ಮತದಾನ ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದ್ದು, ಅದೇ ದಿನ 5 ಗಂಟೆಗೆ ಮತ ಎಣಿಕೆ ಶುರುವಾಗಲಿದೆ. 20ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement