ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ. ಬೇರೆ ವ್ಯವಸ್ಥೆ ಆಗುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಅವರ ನೇತೃತ್ವದ ಸಚಿವ ಸಂಪುಟ ವಿಸರ್ಜನೆ ಆಗಿದೆ.

ನಿನ್ನೆ ಗುರುವಾರ, ಸಿದ್ದರಾಮಯ್ಯ ಲೋಕ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದರು. ಆದರೆ ರಾಜ್ಯಪಾಲರು ಇಂದೋರಿಗೆ ತೆರಳಿದ್ದ ಕಾರಣ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ ಅವರಿಗೆ ಸಲ್ಲಿಸಿದ್ದರು. ಗುರುವಾರ ರಾತ್ರಿ ವಾಪಸ್ಸಾಗಿದ್ದ ರಾಜ್ಯಪಾಲರು ಇಂದು ಶುಕ್ರವಾರ ಬೆಳಿಗ್ಗೆ ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ದೆಹಲಿಗೆ ತೆರಳಿದ್ದಾರೆ. ಡಿಕೆ ಶಿವಕುಮಾರ ಮುಂದಿನ ಮುಖ್ಯಮಂತ್ರಿಯಾಗುವುದು ನಿಚ್ಚಳವಾಗಿದೆ. ಶನಿವಾರ (ಮೇ 30) ಕಾಂಗ್ರೆಸ್‌ ಶಾಸಕಾಂಗದ ಸಭೆ ನಡೆಯುವ ಸಾಧ್ಯತೆಯಿದ್ದು, ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಾಯಕನ ಆಯ್ಕೆ ನಡೆಯಲಿದೆ.

ಪ್ರಮುಖ ಸುದ್ದಿ :-   ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement