ವಿಡಿಯೋ | ಅಭಿಷೇಕ ಬ್ಯಾನರ್ಜಿ ಬೆನ್ನಲ್ಲೇ ಹೂಗ್ಲಿಯಲ್ಲಿ ಮತ್ತೊಬ್ಬ ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ ಮೇಲೆ ಹಲ್ಲೆ

ಕೋಲ್ಕತ್ತಾ :  ತೃಣಮೂಲ ಪಕ್ಷದ ಎರಡನೇ ಕಮಾಂಡರ್ ಅಭಿಷೇಕ ಬ್ಯಾನರ್ಜಿ ಮೇಲೆ ಗುಂಪು ಹಲ್ಲೆ ನಡೆಸಿದ ಒಂದು ದಿನದ ನಂತರ, ಇಂದು, ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಮತ್ತೊಬ್ಬ ಸಂಸದ ಕಲ್ಯಾಣ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ. ಅವರದೇ ಸ್ವಕ್ಷೇತರವಾದ ಹೂಗ್ಲಿಯ ಚಂಡಿತಾಲದಲ್ಲಿ ಪೊಲೀಸರು ಜನಸಮೂಹವನ್ನು ನಿಂತ್ರಿಸುತ್ತಿರುವಾಗ ಕಲ್ಯಾಣ ಬ್ಯಾನರ್ಜಿ ಅವರ ತಲೆಗೆ ಪೆಟ್ಟು ಬಿದ್ದಿದ್ದು, ನಂತರ ಅವರು ತಮ್ಮ ತಲೆಗೆ ಕೈ ಹಿಡಿದುಕೊಂಡು ನೆಲದ ಮೇಲೆ ಬೀಳುವುದನ್ನು ವಿಡಿಯೋ ದೃಶ್ಯಗಳಲ್ಲಿ ಕಂಡುಬಂದಿದೆ.
ಚಂದಿತಾಲಾ ಪೊಲೀಸ್ ಠಾಣೆಗೆ ನಿಯೋಗದ ಜೊತೆ (ಡೆಪ್ಯುಟೇಷನ್) ಮನವಿ ಸಲ್ಲಿಸಲು ಹೋಗುತ್ತಿದ್ದ ಮಾರ್ಗಮಧ್ಯೆ ಸಂಸದರ ಮೇಲೆ ಈ ದಾಳಿ ನಡೆದಿದ್ದು, ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ವರದಿಗಳ ಪ್ರಕಾರ, ಕಲ್ಯಾಣ ಬ್ಯಾನರ್ಜಿ ಮತ್ತು ಅವರ ಬೆಂಬಲಿಗರು ಸೋನಾರಪುರದಲ್ಲಿ ಅಭಿಷೇಕ ಬ್ಯಾನರ್ಜಿ ಅವರ ಮೇಲೆ ಮೊಟ್ಟೆ ಎಸೆತ ಹಾಗೂ ಹಲ್ಲೆಯ ಆರೋಪಿತ ಘಟನೆಯ ಕುರಿತು ಚಂಡಿತಾಲದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಬ್ಯಾನರ್ಜಿ ಅವರ ಮೇಲೆ ಈ ದಾಳಿ ನಡೆದಿದೆ.

ಸಂಸದ ಕಲ್ಯಾಣ ಬ್ಯಾನರ್ಜಿ ಅವರು ಚಂದಿತಾಲಾ ಪೊಲೀಸ್ ಠಾಣೆಯತ್ತ ತೆರಳುತ್ತಿದ್ದಾಗ ಬಿಜೆಪಿ ಪ್ರತಿಭಟನಾಕಾರರ ಗುಂಪೊಂದು ಅವರನ್ನು ಸುತ್ತುವರಿದಿದೆ. ಬಿಜೆಪಿ ಕಾರ್ಯಕರ್ತರು ಟಿಎಂಸಿ ವಿರೋಧಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಬ್ಯಾನರ್ಜಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದರು. ಕೆಲವೇ ಕ್ಷಣಗಳಲ್ಲಿ ಪರಿಸ್ಥಿತಿ ಕೈಮೀರಿ ಹೋಗಿದ್ದು, ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ತಕ್ಷಣವೇ ಹದಗೆಟ್ಟಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳ ದೊಡ್ಡ ತುಕಡಿಯನ್ನು ಸ್ಥಳಕ್ಕೆ ನಿಯೋಜಿಸಬೇಕಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳ ದೊಡ್ಡ ತುಕಡಿಯನ್ನು ಸ್ಥಳಕ್ಕೆ ನಿಯೋಜಿಸಬೇಕಾಯಿತು. ಪ್ರತಿಭಟನೆಯ ನಡುವೆಯೇ ಸಂಸದರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಮುಖ ಸುದ್ದಿ :-   ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ; ಕಕ್ಷೆ ತಲುಪಿದ ಸ್ಕೈರೂಟ್‌ನ ಖಾಸಗಿ ರಾಕೆಟ್ ‘ವಿಕ್ರಂ-1’

ವಿಡಿಯೊಗಳಲ್ಲಿ ಬ್ಯಾನರ್ಜಿ ಟ್ರಕ್ ಹಿಂದೆ ನಡೆದುಕೊಂಡು ಹೋಗುತ್ತಿರುವಾಗ ಅವರ ಹಿಂದಿನಿಂದ ಏನೋ ಅವರ ತಲೆಗೆ ಬಡಿದಿರುವುದು ಕಂಡುಬಂದಿದೆ.  ನಂತರ, ಬ್ಯಾನರ್ಜಿ ತಮ್ಮ ಗಾಯಗೊಂಡ ತಲೆಗೆ   ಕರವಸ್ತ್ರವನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಸಂಸದರು ಘಟನೆಯನ್ನು ತೀವ್ರವಾಗಿ ಖಂಡಿಸಿದರು, ಅಧಿಕೃತ ನಿಯೋಗದ ಜೊತೆ ಮನವಿ ಸಲ್ಲಿಸಲು ಪೊಲೀಸ್ ಠಾಣೆಗೆ ಹೋಗುವಾಗ ತಮ್ಮನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿದರು. ಈ ಘಟನೆಯನ್ನು ಪ್ರತಿಭಟನೆ ನಡೆಸುವ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸುತ್ತಿದ್ದ ವ್ಯಕ್ತಿಗಳ ಮೇಲೆ ಅಪ್ರಚೋದಿತ ದಾಳಿ ಎಂದು ಅವರು ಬಣ್ಣಿಸಿದರು.
ಚಂಡಿತಾಲ ಶ್ರೀರಾಂಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. 2009 ರಿಂದ ಬ್ಯಾನರ್ಜಿ ನಾಲ್ಕು ಬಾರಿ ಈ ಸ್ಥಾನವನ್ನು ಗೆದ್ದಿದ್ದಾರೆ. ತಮ್ಮ ಮೇಲೆ ನಡೆದ ದಾಳಿಗೆ ಬಿಜೆಪಿಯನ್ನು ದೂಷಿಸಿದ ಅವರು, ತಮ್ಮ ತಲೆಗೆ ಕ್ರಿಕೆಟ್ ಚೆಂಡು ಅಥವಾ ಕಲ್ಲು ಎಸೆಯಲಾಗಿದೆ ಎಂದು ಆರೋಪಿಸಿದರು. ಘಟನಾ ಸ್ಥಳದ ದೃಶ್ಯಾವಳಿಗಳಲ್ಲಿ ತೀವ್ರ ನೂಕಾಟ-ತಳ್ಳಾಟ ನಡೆದಿರುವುದು ಕಂಡುಬಂದಿದ್ದು, ಭದ್ರತಾ ಸಿಬ್ಬಂದಿ ಮತ್ತು ಸಂಸದರ ಬೆಂಬಲಿಗರು ಜನಸಮೂಹವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿರುವುದು ಕಂಡುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಸಂಸದ ಕಲ್ಯಾಣ ಬ್ಯಾನರ್ಜಿ ಅವರು ನೆಲದ ಮೇಲೆ ಮಲಗಿರುವುದು ಕಾಣಿಸುತ್ತದೆ. ತಕ್ಷಣವೇ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಅವರನ್ನು ಸುತ್ತುವರಿದು ರಕ್ಷಣೆ ನೀಡುತ್ತಿರುವುದು ಕಂಡುಬಂದಿದೆ.
ಘಟನಾ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಹಾಗೂ ಸಂಸದರಿಗೆ ರಕ್ಷಣೆ ಒದಗಿಸಿದ್ದಾರೆ. ಸದ್ಯ ಹೂಗ್ಲಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ತುಣುಕುಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಆಧರಿಸಿ, ಘಟನೆ ನಿಖರವಾಗಿ ಹೇಗೆ ಸಂಭವಿಸಿತು ಮತ್ತು ಅದರಲ್ಲಿ ಭಾಗಿಯಾದವರು ಯಾರು ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಪಕ್ಷಾತೀತವಾಗಿ ಹಲವು ರಾಜಕೀಯ ನಾಯಕರು ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದ್ದು, ಸಂಸದರ ಮೇಲಿನ ಹಲ್ಲೆ ಯತ್ನ ಹಾಗೂ ಈ ಸಂಘರ್ಷಕ್ಕೆ ಕಾರಣವಾದ ಸನ್ನಿವೇಶಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಈ ದಾಳಿಯನ್ನು ತೃಣಮೂಲ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಮುಂಬರುವ ಪ್ರಮುಖ ರಾಜಕೀಯ ಚಟುವಟಿಕೆಗಳ ಮುನ್ನಾದಿನದಂದೇ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಈ ಪ್ರತಿಭಟನೆ ಮತ್ತು ದಾಳಿಯನ್ನು ವ್ಯವಸ್ಥಿತವಾಗಿ ಸಂಘಟಿಸಲಾಗಿದೆ ಎಂದು ಟಿಎಂಸಿ ಆರೋಪ ಮಾಡಿದೆ.

ಪ್ರಮುಖ ಸುದ್ದಿ :-   ವಿಡಿಯೊ | ಸಿಜೆಪಿ ಸಂಸ್ಥಾಪಕ ಅಭಿಜೀತ ದೀಪ್ಕೆ ಮುಖಕ್ಕೆ ಶಾಯಿ ಎಸೆದ ಮಹಿಳೆ ; ಹೈಡ್ರಾಮಾಕ್ಕೆ ಸಾಕ್ಷಿಯಾದ ಜಂತರ್ ಮಂತರ್‌ ಪ್ರತಿಭಟನೆ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement