ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ ನೇಮಕ

ನವದೆಹಲಿ: ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಡಿಕೆ ಶಿವಕುಮಾರ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದರ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ ಅವರನ್ನು ಕೆಪಿಸಿಸಿ ನೂತನ … Continued

ಬಂಗಾಳ ರಾಜಕೀಯದಲ್ಲಿ ಸುನಾಮಿ ; ದೀದಿಗೆ ಬಿಗ್ ಶಾಕ್ : ಟಿಂಎಂಸಿ ಶಾಸಕರ ಬೆಂಬಲದಿಂದಲೇ ವಿಧಾನಸಭೆ ವಿಪಕ್ಷದ ನಾಯಕನಾದ ಉಚ್ಚಾಟಿತ ಶಾಸಕ..!

ಕೋಲ್ಕತ್ತಾ :  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಉಂಟಾಗಿದ್ದ ಬಿರುಕು ಈಗ ಮರಳಿ ಸರಿಪಡಿಸಲಾಗದ ಹಂತಕ್ಕೆ ತಲುಪಿದೆ. ಟಿಎಂಸಿಯ ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಆಘಾತದಲ್ಲಿ ಬಂಗಾಳ ವಿಧಾನಸಭೆಯ ಸ್ಪೀಕರ್ ರಥೀಂದ್ರ ಬೋಸ್ ಅವರು ಟಿಎಂಸಿಯ ಉಚ್ಚಾಟಿತ ಬಂಡಾಯ ಶಾಸಕ ನಾಯಕ ರಿತಬ್ರತ ಬ್ಯಾನರ್ಜಿ ಅವರನ್ನು ಅಧಿಕೃತವಾಗಿ ವಿರೋಧ ಪಕ್ಷದ ನಾಯಕ ಎಂದು ಅಂಗೀಕರಿಸಿದ್ದಾರೆ. … Continued

ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ ಪ್ರಮಾಣ ವಚನ, 13 ಸಚಿವರಿಂದಲೂ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ (DK Shivakumar) ಲೋಕಭವನದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂ ದ್‌ಗೆಹ್ಲೋಟ್‌ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷದ ನಾಯಕ ರಾಹುಲ್‌ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ ವರಿಷ್ಠರು,  ಪಕ್ಷದ ಶಾಸಕರು,ಕುಟುಂಬಸ್ಥರು,  ಸೇರಿ ನೂರಾರು ಮಂದಿ … Continued

ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ) ಒಳಗಿನ ಆಂತರಿಕ ಬಂಡಾಯ ಬುಧವಾರ ನಿರ್ಣಾಯಕ ತಿರುವು ಪಡೆದುಕೊಂಡಿದೆ. ಟಿಎಂಸಿಯಿಂದ ಉಚ್ಚಾಟಿತರಾಗಿರುವ ಶಾಸಕ ರಿತಬ್ರತ ಬ್ಯಾನರ್ಜಿ ಅವರಿಗೆ ಪಕ್ಷದ 58 ಭಿನ್ನಮತೀಯ ಶಾಸಕರು ಬೆಂಬಲ ಘೋಷಿಸಿದ್ದು, ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಕುರಿತ ತಮ್ಮ ನಿರ್ಧಾರವನ್ನು ಪತ್ರಕ್ಕೆ ಸಹಿ ಹಾಕುವ ಮೂಲಕ ಪಶ್ಚಿಮ ಬಂಗಾಳ … Continued

ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ಬೆಂಗಳೂರು:  ಡಿ.ಕೆ. ಶಿವಕುಮಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಇದರೊಂದಿಗೆ, ರಾಜ್ಯದ ಗಮನ ಈಗ ಅವರ ಮೊದಲ ಸಚಿವ ಸಂಪುಟದ ರಚನೆಯತ್ತ ನೆಟ್ಟಿದೆ. ಶಿವಕುಮಾರ ಸಂಪುಟ ಸೇರಲಿರುವ ನಾಯಕರ ಕುರಿತಾಗಿದ್ದ ಕುತೂಹಲಕ್ಕೆ ಸದ್ಯ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸೇರಿದಂತೆ ಒಟ್ಟು 14 ನಾಯಕರು ಇಂದು, ಬುಧವಾರ (ಜೈನ್‌ ೩) ಪ್ರಮಾಣ ವಚನ … Continued

ದೆಹಲಿ ಹೋಟೆಲ್‌ನಲ್ಲಿ ಅಗ್ನಿ ಅವಘಡ : 21 ಮಂದಿ ಸಾವು ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಧುಮುಕಿದ ಇಬ್ಬರು ಮಹಿಳೆಯರು

ನವದೆಹಲಿ: ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟಿನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ರೆಸ್ಟೋರೆಂಟ್‌’ನಲ್ಲಿ ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಗ್ನಿ ದುರಂತವು … Continued

ಒಎಸ್‌ಎಂ ಮೌಲ್ಯಮಾಪನ ವಿವಾದದ ಬೆನ್ನಲ್ಲೇ ಬಿಗ್ ಸರ್ಜರಿ: ಸಿಬಿಎಸ್‌ಇ ನೂತನ ಮುಖ್ಯಸ್ಥರಾಗಿ ಲೋಖಂಡೆ ಪ್ರಶಾಂತ ಸೀತಾರಾಮ ನೇಮಕ

ನವದೆಹಲಿ : ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ (CBSE) ನೂತನ ಮುಖ್ಯಸ್ಥರಾಗಿ ಹಿರಿಯ ಐಎಎಸ್ ಅಧಿಕಾರಿ ಲೋಖಂಡೆ ಪ್ರಶಾಂತ ಸೀತಾರಾಮ ಹಾಗೂ ನೂತನ ಕಾರ್ಯದರ್ಶಿಯಾಗಿ ಹಿರಿಯ ಅಧಿಕಾರಿ ವರುಣ ಭಾರದ್ವಾಜ ಅವರನ್ನು ಸರ್ಕಾರ ಮಂಗಳವಾರ ನೇಮಕ ಮಾಡಿದೆ. ಸಿಬಿಎಸ್‌ಇ ಇತ್ತೀಚೆಗೆ ಜಾರಿಗೆ ತಂದಿದ್ದ ‘ಆನ್-ಸ್ಕ್ರೀನ್ ಮಾರ್ಕಿಂಗ್’ (OSM) ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯ ಸುತ್ತ ಭಾರಿ ವಿವಾದ … Continued

ಬಾಲಕಿಯರನ್ನು ನಾಯಿ ಪಂಜರದಲ್ಲಿ ಕೂಡಿಹಾಕಿದ್ರು, 700 ಜನರಿಂದ ಅತ್ಯಾಚಾರ: ಬ್ರಿಟನ್ ಸಂಸತ್ತಿನಲ್ಲಿ ಪಾಕ್ ‘ಗ್ರೂಮಿಂಗ್ ಗ್ಯಾಂಗ್’ ಭೀಕರತೆ ಬಿಚ್ಚಿಟ್ಟ ಸಂಸದ

ಲಂಡನ್ : ಯುನೈಟೆಡ್ ಕಿಂಗ್‌ಡಮ್‌ನಲ್ಲಿ (ಯುಕೆ) ವ್ಯವಸ್ಥಿತವಾಗಿ ನಡೆಯುತ್ತಿರುವ “ಗುಂಪು ಆಧಾರಿತ ಮಕ್ಕಳ ಲೈಂಗಿಕ ಶೋಷಣೆ” ಹಾಗೂ “ಗ್ರೂಮಿಂಗ್ ಗ್ಯಾಂಗ್ಸ್” (ಬಾಲಕಿಯರನ್ನು ಸೆಳೆದು ಲೈಂಗಿಕ ದೌರ್ಜನ್ಯವೆಸಗುವ ಜಾಲ) ಕುರಿತಾದ ಚರ್ಚೆ ಈಗ ಬ್ರಿಟಿಷ್ ಸಂಸತ್ತಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಸ್ವತಂತ್ರ ಬ್ರಿಟಿಷ್ ಸಂಸದ ರೂಪರ್ಟ್ ಲೋವೆ ಅವರು ಸಂಸತ್ತಿನಲ್ಲಿ ಸಂತ್ರಸ್ತೆಯರ ಅತ್ಯಂತ ಭೀಕರ ಹಾಗೂ ಗ್ರಾಫಿಕ್ … Continued

ಬೃಹತ್ ಪ್ರತಿಭಟನೆ ನಡೆಸಿದ ಮಮತಾ ; 78 ಶಾಸಕರು, 41 ಸಂಸದರಿದ್ರೂ ಬಂದದ್ದು 8 ಶಾಸಕರು 6 ಸಂಸದರು ಮಾತ್ರ ! ಟಿಎಂಸಿಯಲ್ಲಿ ಹೀಗ್ಯಾಕೆ ?

ಕೋಲ್ಕತ್ತಾ: ಬಂಗಾಳ ಚುನಾವಣೆಯ ಹೀನಾಯ ಸೋಲಿನ ನಂತರ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಪಕ್ಷವನ್ನು ಸಮಾಧಾನಪಡಿಸುವ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬುವ ನಿಟ್ಟಿನಲ್ಲಿ ಟಿಎಂಸಿ ಸುಪ್ರಿಮೋ ಮಮತಾ ಬ್ಯಾನರ್ಜಿ ಮತ್ತೆ ತಮ್ಮ ಹಳೆಯ ‘ಸ್ಟ್ರೀಟ್ ಫೈಟರ್’ (ಬೀದಿ ಹೋರಾಟಗಾರ್ತಿ) ಅವತಾರಕ್ಕೆ ಮರಳಿದ್ದಾರೆ. ಸೋಲಿನ ನಂತರ ಹಮ್ಮಿಕೊಂಡ ಮೊದಲ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿಯ … Continued