
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ (Rajya Sabha elections) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸೌಧದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ 3 ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರನ್ನು ಅಭ್ಯರ್ಥಿಗಳಾಗಿ ಕಾಂಗ್ರೆಸ್ ಹೆಸರಿಸಿದೆ. ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು, ಸದ್ಯ ಅವರು ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯಸಭೆಯ ಉಪಸಭಾಪತಿಯಾಗಿದ್ದ ಹಾಗೂ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಅವರಿಗೂ ಕಾಂಗ್ರೆಸ್ ಟಿಕೆಟ್ ನೀಡಿದೆ.
ಖರ್ಗೆ ನಾಮಪತ್ರ ಸಲ್ಲಿಸುವ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾರ ಉಪಸ್ಥಿತರಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗಲಿದ್ದು, ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18ರಂದು ಚುನಾವಣೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.
ನಾಮಪತ್ರ ಸಲ್ಲಿಸಲು ಜೂನ್ 8 ಕೊನೆ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು 10 ಕೊನೆಯ ದಿನವಾಗಿದೆ. ಜೂನ್ 18ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಸಂಜೆ 5ಕ್ಕೆ ನಡೆಯಲಿದೆ.



ನಿಮ್ಮ ಕಾಮೆಂಟ್ ಬರೆಯಿರಿ