ಸಿದ್ದಾಪುರ : ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸರ ದಾಳಿ; 3.30 ಲಕ್ಷ ರೂ. ವಶ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನಮನೆ ಗ್ರಾಪಂ ವ್ಯಾಪ್ತಿಯ ಬೆಂಗಳೂರು- ಹೊನ್ನಾವರ ಹೆದ್ದಾರಿಯಲ್ಲಿನ ಮಳವಳ್ಳಿ ಹೊನ್ನೆಕಾರು ಹೋಂ ಸ್ಟೇ ಸಮೀಪ ಬೃಹತ್ ಜೂಜಾಟದ ಅಡ್ಡೆ ಮೇಲೆ ಗುರುವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ.
ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ೫೭ ಜನರನ್ನು ಬಂಧಿಸಿ, ೩.೩೦ ಲಕ್ಷರೂ ನಗದು, ೪೭ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಸ್ಪೀಟ್‌ ಅಡ್ಡೆ ಮೇಲೆ ನಡೆದ ಬೃಹತ್ ಪೊಲೀಸ್ ದಾಳಿ ಇದಾಗಿದೆ. ಇದೇ ವೇಳೆ ವಿವಿಧ ಬಣ್ಣಗಳ ವಿವಿಧ ಮುಖ ಬೆಲೆಯ ೮೩೧ ಟೋಕನ್, ೩ ರಜಿಸ್ಟರ್‌ಗಳು, ಕಟ್ಟಡದ ಒಳಗಡೆ ಅಳವಡಿಸಲಾಗಿದ್ದ ಸಿಸಿಟಿವಿಗೆ ಸಂಬಂಧಪಟ್ಟ ಡಿ.ವಿ.ಆರ್ ಗಳನ್ನು ಜಪ್ತ ಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ಶಿರಸಿ ಹಾಗೂ ಸಿದ್ದಾಪುರ ಪೊಲೀಸರು ದಾಳಿ ನಡೆಸಿದ್ದರು. ಆಪಾದಿತರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸರ್ಕಾರದ ಪರ ದೂರು ದಾಖಲಾಗಿದೆ.

ಪ್ರಮುಖ ಸುದ್ದಿ :-   ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ...: ಸಿಎಂ ಡಿಕೆ ಶಿವಕುಮಾರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement