ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ.
ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, ಕಂದಾಯ ಮತ್ತು ಐಟಿ) ಆಗಿರುವ ಐಎಎಸ್‌ ಅಧಿಕಾರಿ ಮನೀಶ ಮೌದ್ಗಿಲ್ ಅವರಿಗೆ ನೂತನವಾಗಿ ಸೃಷ್ಟಿಸಲಾದ ‘ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನೆ ಅನುಷ್ಠಾನ)’ ಹುದ್ದೆಯ ಹೆಚ್ಚುವರಿ ಪ್ರಭಾರ ಜವಾಬ್ದಾರಿ ನೀಡಲಾಗಿದೆ.
ನಗರಾಭಿವೃದ್ಧಿ ಇಲಾಖೆಯ (ನಗರಾಭಿವೃದ್ಧಿ ಮತ್ತು ಪುರಸಭೆಗಳು) ಕಾರ್ಯದರ್ಶಿಯಾಗಿದ್ದ ದೀಪಾ ಚೋಳನ್ ಅವರನ್ನು ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಡಾ. ಪ್ರಸಾದ ಎನ್.ವಿ. ಅವರಿಂದ ತೆರವಾದ ಸ್ಥಾನಕ್ಕೆ ಇವರನ್ನು ನಿಯೋಜಿಸಲಾಗಿದೆ.

ಪೋಸ್ಟಿಂಗ್‌ಗಾಗಿ ಕಾಯುತ್ತಿದ್ದ ಐಎಎಸ್‌ ಅಧಿಕಾರಿ ಕಾವೇರಿ ಬಿ.ಬಿ. ಅವರನ್ನು ನಗರಾಭಿವೃದ್ಧಿ ಇಲಾಖೆಯ (ನಗರಾಭಿವೃದ್ಧಿ ಮತ್ತು ಪುರಸಭೆಗಳು) ನೂತನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಐಎಎಸ್‌ ಅಧಿಕಾರಿ ಡಾ. ವೆಂಕಟೇಶ್ ಎಂ.ವಿ. IAS ಅವರನ್ನು ಸಹಕಾರ ಸಂಘಗಳ ನಿಬಂಧಕರಾಗಿ (Registrar for Co-operative Societies) ವರ್ಗಾಯಿಸಲಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಐಎಎಸ್‌ ಅಧಿಕಾರಿ ಡಾ. ಸೆಲ್ವಮಣಿ ಆರ್. ಅವರನ್ನು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಾಗಿ (Commissioner for Transport and Road Safety) ವರ್ಗಾಯಿಸಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರವು ಭಾನುವಾರ ರಾಜ್ಯದ ಇಬ್ಬರು ಅತ್ಯಂತ ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.
ಐಪಿಎಸ್‌ ಅಧಿಕಾರಿ ಡಾ. ಪ್ರಣಬ್ ಮೊಹಂತಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ (DGP) ಹುದ್ದೆಯಿಂದ ಅಪರಾಧ ತನಿಖಾ ಇಲಾಖೆ (CID), ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ವಿಭಾಗದ ಡಿಜಿಪಿಯಾಗಿ ನೇಮಿಸಲಾಗಿದೆ. ಇದರ ಜೊತೆಗೆ ಇವರಿಗೆ ಸೈಬರ್ ಕ್ರೈಮ್ ವಿಭಾಗದ ಡಿಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಲಾಗಿದೆ.
ಐಪಿಎಸ್‌ ಅಧಿಕಾರಿ ಡಾ. ಚಂದ್ರಗುಪ್ತ ಅವರನ್ನು ಭದ್ರತಾ ವಿಭಾಗದ (ಗುಪ್ತಚರ) ಐಜಿಪಿ ಹುದ್ದೆಯಿಂದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (IGP), ಗುಪ್ತಚರ ವಿಭಾಗ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement