
ಬೆಂಗಳೂರು: ರಾಜ್ಯಸಭಾ ಮತ್ತು ವಿಧಾನ ಪರಿಷತ್ಗೆ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ರಾಜ್ಯಸಭೆಗೆ ಡಾ. ಎಂ.ನಾಗರಾಜ ಹಾಗೂ ವಿಧಾನ ಪರಿಷತ್ಗೆ ಲಿಂಗರಾಜ ಪಾಟೀಲ ಮತ್ತು ರಘು ಕೌಟಿಲ್ಯ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟವೂ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ. ಮೈತ್ರಿಕೂಟವು 3ನೇ ಅಭ್ಯರ್ಥಿಯಾಗಿ ಗೋವಿಂದ ರಾಜು ಹೆಸರನ್ನು ಘೋಷಿಸಿದೆ.
ರಾಜ್ಯಸಭೆ ಅಭ್ಯರ್ಥಿಯಾಗಿರುವ ಡಾ. ನಾಗರಾಜ ಅವರು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ (KPSC) ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೂಲತಃ ಹುಬ್ಬಳ್ಳಿಯವರಾದ ಡಾ.ಎಂ.ನಾಗರಾಜ ಅನೇಕ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಎಬಿವಿಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ (ಆರ್ಎಸ್ಎಸ್) ಸಂಘಟನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು.
ವಿಧಾನ ಪರಿಷತ್ ಅಭ್ಯರ್ಥಿಯಾಗಿರುವ ಲಿಂಗರಾಜ ಪಾಟೀಲ ಸಹ ಹುಬ್ಬಳ್ಳಿಯವರಾಗಿದ್ದಾರೆ. ಅವರು ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಅವರು ಬಿಜೆಪಿಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ. ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಮೈಸೂರಿನವರು. ಪಕ್ಷದ ಸಂಘಟನೆಯಿಂದ ಬಂದವರು.



ನಿಮ್ಮ ಕಾಮೆಂಟ್ ಬರೆಯಿರಿ