ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್
ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಮಾನನಷ್ಟ ಮೊಕದ್ದಮೆಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ಉಲ್ಲೇಖಿಸಿದೆ. ನಿರಂತರ ಕಾನೂನು ಹೋರಾಟದಿಂದ ಇಬ್ಬರೂ ಅಧಿಕಾರಿಗಳು ಪರಸ್ಪರರ ವೃತ್ತಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ. … Continued