ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಬೆಂಗಳೂರು : ನೈಋತ್ಯ ಮುಂಗಾರು (Monsoon 2026) ಕರ್ನಾಟಕದಾದ್ಯಂತ ಚುರುಕುಗೊಂಡಿದ್ದು, ಜೂ.15ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
 ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಕರಾವಳಿ ತೀರದ ಜನರಿಗೆ ಹಾಗೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ  ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯು ಹೇಳಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement