
ಶಿರಸಿ: ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿಯು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಬಳಿ ನಡೆದಿದೆ ಎಂದು ವರದಿಯಾಗಿದೆ.
ಟಾಯ್ಲೆಟ್‌ನಲ್ಲಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹೆದರಿದ ಬಾಲಕಿ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದಿದ್ದಾಳೆ ಎನ್ನಲಾಗಿದ್ದು, ಇದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಹಾಸ್ಟೆಲ್‌ನ ಕಸ ಸ್ವಚ್ಛ ಮಾಡುವವರು ಸ್ವಚ್ಛ ಮಾಲು ಬಂದ ವೇಳೆ ಹಾಸ್ಟೆಲ್ ಟಾಯ್ಲೆಟ್ ಕಿಟಕಿ ಬಳಿ ನವಜಾತ ಶಿಶುವಿನ ಶವ ಸಿಕ್ಕಿದೆ. ಅವರು ಈ ವಿಷಯವನ್ನು ಹಾಸ್ಟೆಲ್ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ. ನಂತರ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಬಾಲಕಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಳಾಗಿದ್ದಳು. ಈ ವೇಳೆ ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಶಿರಸಿ ತಹಶೀಲ್ದಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ