
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟ ಘಟನೆ ನಡೆದಿದೆ ಎಂದುವರದಿಯಾಗಿದೆ.
ಬಾಲಕ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೊಡನವಳ್ಳಿ ಗ್ರಾಮದ ಗೌತಮ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋ (6) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ವಿದ್ಯಾರ್ಥಿ ಬಾಲಕ, ಶಾಲೆ ಮುಗಿಯುವ ಸಮಯದಲ್ಲಿ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಶಾಲೆ ಶಿಕ್ಷಕರು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ದುರಾದೃಷ್ಟವಶಾತ್ ಬಾಲಕ ತ್ರಿಲೋಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ಹೇಳಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಗ್ಯವಾಗಿ ಇದ್ದ ಪುಟ್ಟ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ.



ನಿಮ್ಮ ಕಾಮೆಂಟ್ ಬರೆಯಿರಿ