ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ.
ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ ಕುಮಟಾಕ್ಕೆ ಪ್ರವಾಸ ಬಂದಿದ್ದು, ಕಡ್ಲೆ ಬೀಚ್ ಸಮೀಪದ ರೆಸಾರ್ಟ್‌ನಲ್ಲಿ ಮೂರು ದಿನಗಳಿಂದ ತಂಗಿದ್ದರು ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ ಜೀವನ್ ಹಾಗೂ ಸ್ನೇಹಿತರು ಸಮುದ್ರ ಸ್ನಾನಕ್ಕೆ ತೆರಳಿದ್ದರು. ಸಮುದ್ರತೀರದಲ್ಲಿ ರೀಲ್ಸ್ ಮಾಡಲು ಮುಂದಾಗಿ ಸಮುದ್ರದಲ್ಲಿ ಇಳಿದ ಜೀವನ್‌ ಅಲೆಗಳ ಹೊಡೆತಕ್ಕೆ ಕೊಚ್ಚಿಹೋಗಿದ್ದಾನೆ.ಈ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ಸಿಲುಕಿದ ಜೀವನ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸ್ ಠಾಣೆ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಕರಾವಳಿ ಕಾವಲು ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ನಡೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement