ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತು

ಧಾರವಾಡ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಿ ಕವಿವಿ ಕುಲಸಚಿವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವುದು, ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡುತ್ತಿರುವ ಬಗ್ಗೆ ಕುಲಪತಿಗಳಿಗೆ ದೂರು ಸಲ್ಲಿಕೆಯಾಗಿದ್ದವು. ಕಿರುಕುಳ ನೀಡಿದಕ್ಕೆ ವಿದ್ಯಾರ್ಥಿನಿ ಅಧ್ಯಯನವನ್ನು ಮಧ್ಯದಲ್ಲೇ ಬಿಟ್ಟು ತೆರಳಿದ ನಂತರವೂ ಆಕೆಯನ್ನು ಮರಳಿ ಕರೆಸುವಂತೆ ಇತರ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಆ ವಿದ್ಯಾರ್ಥಿನಿಯನ್ನು ಕರೆ ತಂದರಷ್ಟೇ ನಿನ್ನ ಪಿಎಚ್‌ಡಿ ಮಂಡನೆಗೆ ಸಹಕಾರ ನೀಡುತ್ತೇನೆ ಎಂದು ವಿದ್ಯಾರ್ಥಿಯೊಬ್ಬರಿಗೆ ಕಿರುಕುಳ ನೀಡಿದ ಬಗ್ಗೆ ಆರೋಪಿಸಲಾಗಿದೆ.
ಈ ಕುರಿತು ಕುಲ ಸಚಿವರು ಸಮಿತಿ ರಚನೆ ಮಾಡಿದ್ದರು. ಅಲ್ಲದೇ ಪ್ರಾಧ್ಯಾಪಕನ ಅಮಾನತು ಮಾಡಿ ಅವರ ವಿರುದ್ಧ ಕಾನೂ‌ನು ಕ್ರಮ ಜರುಗಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಬುಧವಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕವಿವಿ ಕುಲಪತಿಗಳ ಕಚೇರಿ ಎದುರು ಪ್ರತಿಭಟನೆ ತೀವ್ರಗೊಳಿಸಿತ್ತು. ಇದರ ಬೆನ್ನಿಗೇ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಲಾಗಿದೆ.

ಪ್ರಮುಖ ಸುದ್ದಿ :-   ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement