
ಬೆಂಗಳೂರು: ಮುಂಗಾರು ಕೊಂಚ ಚುರುಕುಗೊಂಡಿದ್ದು, ಮುಂದಿನ ಒಂದು ವಾರದ ಕಾಲ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 22ರಿಂದ ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ , ಹಾವೇರಿ, ಹಾಸನ , ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಜೂನ್ 27ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸತತವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜೂನ್ 22, 23 ಮತ್ತು 25 ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 22 ಮತ್ತು 25 ರಂದು ಧಾರವಾಡ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ನಗರದಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ನಗರದ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 21°C ಇರಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ