ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 24ರಿಂದ 4 ದಿನ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಜೂನ್ 24 ರಿಂದ ಜೂನ್ 29ರ ವರೆಗೆ ಕರ್ನಾಟಕದಾದ್ಯಂತ ಮುಂಗಾರು ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಪ್ರಮುಖವಾಗಿ ಈ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತ್ಯಂತ ಭಾರಿ ಮಳೆಯ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು … Continued

ಮುಂಡಗೋಡ | ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಮಂಗಳವಾರ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರಲೋಕಾಯುಕ್ತ ಅಧಿಕಾರಿಗಳು ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಹೆಸ್ಕಾಂ ಉಪವಿಭಾಗದ ಎಇಇ ಹಾಗೂ ಕಂದಾಯ ನಿರೀಕ್ಷಕ ಪ್ರತ್ಯೇಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ … Continued

ಎರಡು ಕೊಲೆ ಸಂಚು ವಿಫಲ ; ನಂತ್ರ ಜನ್ಮದಿನದ ನೆಪದಲ್ಲಿ ಕರೆದೊಯ್ದು ಭಾವಿ ಪತಿಯನ್ನೇ 400 ಅಡಿ ಪ್ರಪಾತಕ್ಕೆ ತಳ್ಳಿ ಸಾಯಿಸಿದ ಯುವತಿ !

ಪುಣೆ : ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಲೋಹಗಢ್ ಕೋಟೆಯಲ್ಲಿ ನಡೆದ ಭೀಕರ ಚಾರಣ ದುರಂತ ಎಂದು ಆರಂಭದಲ್ಲಿ ವರದಿಯಾಗಿದ್ದ ಪ್ರಕರಣವೊಂದು ಈಗ ಒಂದು ಅತ್ಯಂತ ಕ್ರೂರ ಹಾಗೂ ವ್ಯವಸ್ಥಿತ ಕೊಲೆ ಸಂಚು ಎಂದು ಬೆಳಕಿಗೆ ಬಂದಿದೆ. ತನ್ನ ಭಾವಿ ಪತಿ, 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ ಅಗರ್ವಾಲ್‌ ಅವರನ್ನು ಅತ್ಯಂತ … Continued

ಸಿಬಿಎಸ್‌ಇ ಮರು-ಮೌಲ್ಯಮಾಪನ : 500ಕ್ಕೆ 500 ಅಂಕ ಪಡೆದು ಇತಿಹಾಸ ಸೃಷ್ಟಿಸಿದ ರಾಂಚಿಯ ವಿದ್ಯಾರ್ಥಿನಿ ಅವನಿ ಕೇಜ್ರಿವಾಲ್ !

ನವದೆಹಲಿ: ರಾಂಚಿಯ ಸೈಲ್ ಟೌನ್‌ಶಿಪ್‌ನ ದೆಹಲಿ ಪಬ್ಲಿಕ್ ಸ್ಕೂಲ್ (DPS)ನ ವಾಣಿಜ್ಯ (Commerce) ವಿಭಾಗದ ವಿದ್ಯಾರ್ಥಿನಿ ಅವನಿ ಕೇಜ್ರಿವಾಲ್ ಸಿಬಿಎಸ್‌ಇ (CBSE) 12ನೇ ತರಗತಿಯ ಮರು-ಮೌಲ್ಯಮಾಪನದಲ್ಲಿ (Re-evaluation) ನೂರಕ್ಕೆ ನೂರು ಅಂಕಗಳನ್ನು ಪಡೆಯುವ ಮೂಲಕ ಅಸಾಧಾರಣ ಸಾಧನೆ ಮಾಡಿದ್ದಾರೆ. ತಮ್ಮ ಉತ್ತರ ಪತ್ರಿಕೆಗಳ ಮರು-ಪರಿಶೀಲನೆಯ ನಂತರ ಅವರು ಮುಖ್ಯ 5 ವಿಷಯಗಳಲ್ಲಿ 500 ಕ್ಕೆ 500 … Continued

ಕೇಂದ್ರ ಸಚಿವ ಸ್ಥಾನಕ್ಕೆ ಜಾರ್ಜ್ ಕುರಿಯನ್ ರಾಜೀನಾಮೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಮಂಗಳವಾರ (ಜೂನ್ 23) ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ರಾಜ್ಯಸಭಾ ಅವಧಿ ಮುಕ್ತಾಯವಾದ … Continued

ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ಟಿಎಂಸಿ ಆಂತರಿಕ ಕಲಹ ತಾರಕಕ್ಕೆ ; ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ; ನೂತನ ಅಧ್ಯಕ್ಷರ ನೇಮಕ…!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದ್ದು, 1998 ರಲ್ಲಿ ತೃಣಮೂಲ ಕಾಂಗ್ರೆಸ್ ಅನ್ನು ಸ್ಥಾಪಿಸಿದಾಗಿನಿಂದ ಮಮತಾ ಬ್ಯಾನರ್ಜಿ ಅವರ ಅಧಿಕಾರಕ್ಕೆ ಅತ್ಯಂತ ನೇರವಾದ ಸವಾಲಾಗಿ, ವಿಪಕ್ಷದ ನಾಯಕ ರೀತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣವು ಮಮತಾ ಬ್ಯಾನರ್ಜಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದೆ.ಅವರ ಸ್ಥಾನಕ್ಕೆ ಅರೂಪ್‌ ರಾಯ್‌ ಅವರನ್ನು ನೇಮಕ ಮಾಡಿದೆ. … Continued