ಮಡಿಕೇರಿ: ಎಲ್‌ಇಡಿ ಬಲ್ಬ್ ನುಂಗಿದ 8 ತಿಂಗಳ ಮಗು

ಮಡಿಕೇರಿ: ಎಂಟು ತಿಂಗಳ ಮಗುವೊಂದು ಎಲ್‌ಇಡಿ ಬಲ್ಬ್ ನುಂಗಿದ ಆತಂಕಕಾರಿ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದ್ದು, ವೈದ್ಯರ ಸೂಕ್ತ ಚಿಕಿತ್ಸೆಯಿಂದ ಮಗುವಿನ ಪ್ರಾಣ ಉಳಿದಿದೆ.
ಮಗು ಏಕಾಏಕಿ ವಿಪರೀತವಾಗಿ ಅಳಲು ಆರಂಭಿಸಿದೆ. ಏನೇ ಮಡಿದರೂ ಮಗು ಅಳುವನ್ನು ನಿಲ್ಲಿಸದ ಕಾರಣ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ನಗರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿ ನಂತರ ಎಕ್ಸ್‌ರೇ ಮಾಡಿದ್ದಾರೆ. ಈ ವೇಳೆ ಮಗುವಿನ ಗಂಟಲು ಭಾಗದಲ್ಲಿ ಸಣ್ಣ ಲೋಹದ ವಸ್ತುವೊಂದು ಸಿಲುಕಿರುವುದು ಪತ್ತೆಯಾಗಿದೆ.

ಆರಂಭದಲ್ಲಿ ಮಗು ಲೋಹದ ವಸ್ತುವನ್ನು ನುಂಗಿರಬಹುದೆಂದು ವೈದ್ಯರು ಶಂಕಿಸಿದ್ದರು. ಆದರೆ ಬಳಿಕ ಲ್ಯಾರಿಂಗೊಸ್ಕೋಪ್ ಪರೀಕ್ಷೆ ನಡೆಸಿದಾಗ, ಮಗುವಿನ ಗಂಟಲಲ್ಲಿ ಎಲ್‌ಇಡಿ ಬಲ್ಬ್ ಸಿಲುಕಿಕೊಂಡಿರುವುದು ಗೊತ್ತಾಗಿದೆ. ತಕ್ಷಣವೇ ಇಎನ್‌ಟಿ ತಜ್ಞೆ ಡಾ. ರಾಜಶ್ರಿ ಹಾಗೂ ಮಕ್ಕಳ ತಜ್ಞ ಡಾ. ಖುಶ್ವಂತ್ ಅವರ ನೇತೃತ್ವದ ವೈದ್ಯರ ತಂಡ ಯಾವುದೇ ಶಸ್ತ್ರಚಿಕಿತ್ಸೆ ನಡೆಸದೇ ಅತ್ಯಂತ ಎಚ್ಚರಿಕೆಯಿಂದ ಬಲ್ಬ್ ಅನ್ನು ಹೊರತೆಗೆದಿದೆ.
ಆಟವಾಡುವ ಸಂದರ್ಭದಲ್ಲೇ ಮಗು ಬಲ್ಬ್ ನುಂಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ಸಮಯೋಚಿತ ಚಿಕಿತ್ಸೆ ಹಾಗೂ ಪೋಷಕರ ತಕ್ಷಣದ ಕ್ರಮದಿಂದ ದೊಡ್ಡ ಅನಾಹುತ ಸಂಭವಿಸಿವುದು ತಪ್ಪಿದೆ.

ಪ್ರಮುಖ ಸುದ್ದಿ :-   ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement