ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ ಕರ್ನಾಟಕದ ಭಾಗಗಳಾದ ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 1ರ ವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 30 ರಂದು ಕೊಡಗು-ಚಿಕ್ಕಮಗಳೂರಲ್ಲಿ ಅತಿ ಭಾರಿ ಮಳೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 2ರಿಂದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕದಲ್ಲಿ ಮಳೆ ಚುರುಕಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಕೊಡಗು ಹಾಗೂ ಚಿಕ್ಕಮಂಗಳೂರು ಜಿಲ್ಲೆಗಳಿಗೆ ಜುಲೈ 2 ಹಾಗೂ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಯಚೂರು, ಯಾದಗಿರಿ, ಹಾಸನ, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ