ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾನ್ ಮಸಾಲಾ, ಗುಟ್ಕಾ, ಅಡಿಕೆ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದು ತಕ್ಷಣ ನಿಲ್ಲದಿದ್ದರೆ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ನಿಷೇಧ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಅದಕ್ಕಾಗಿ ನಾವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಮಾದಕ ವ್ಯಸನ ತಡೆಯುವಿಕೆ ದೊಡ್ಡ ಸವಾಲಾಗಿದ್ದು, ನಾವೆಲ್ಲರೂ ಒಂದಾಗಿ ಸೇರಿ, ಯುವ ಪೀಳಿಗೆ ಈ ವ್ಯಸನದ ಸುಳಿಗೆ ಸಿಲುಕದಂತೆ ತಡೆಯಬೇಕಾಗಿದೆ. ಇದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರಿಂದ ‘ಅಪ್ಪಿಕೋ’ ಚಳವಳಿ ; ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement