ಜೂನ್ ಮೊದಲಾರ್ಧದಲ್ಲಿ ಕೈಕೊಟ್ಟ ಮುಂಗಾರು ; ದೇಶಾದ್ಯಂತ ಶೇ. 32 ರಷ್ಟು ಮಳೆ ಕೊರತೆ; ಐಎಂಡಿ ಕಳವಳಕಾರಿ ವರದಿ

ನವದೆಹಲಿ: ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿಸಿ ಸರ್ಕಾರಕ್ಕೆ 10 ಸಾವಿರಕ್ಕೂ ಅಧಿಕ ಪತ್ರ ಸಲ್ಲಿಕೆ

 ಶಿರಸಿ: ಬೇಡ್ತಿ-ವರದಾ ಹಾಗೂ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಜನರು ಸೋಮವಾರ ಶಿರಸಿಯ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಸುಮಾರು 10 ಸಾವಿರಕ್ಕೂ ಅಧಿಕ ಪತ್ರಗಳನ್ನು ಸಲ್ಲಿಸಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಸೇರಿದ್ದ ಸಾವಿರಾರು ಜನರು … Continued

‘ಹಿಂದೂ ಧರ್ಮ ನೋಂದಣಿಯಾಗಿಲ್ಲ’…: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನನ್ನು ತಾನು ನೋಂದಾಯಿಸಿಕೊಳ್ಳಬೇಕು ಹಾಗೂ ತನ್ನ ಹಣಕಾಸು ಸೇರಿದಂತೆ ಇತರೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಬಹಿರಂಗ ಪತ್ರಕ್ಕೆ ತಾನು “ಪ್ರತಿಕ್ರಿಯಿಸುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ ಭಾಗವತ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಇದೆಲ್ಲವೂ … Continued

ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ವಿಡಿಯೋ | ಪ್ರತಿಭಟನೆ ವೇಳೆ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ ಕಿಡಿಗೇಡಿಗಳು

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನವೇ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಅಭಿಜೀತ್ ಕರೆ ನೀಡಿದ್ದರು. ಅದರಂತೆ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದಾಗ … Continued

ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued

ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ಮೈಸೂರು: ಇಲ್ಲಿನ ರೆಸ್ಟೋ ಪಬ್‌ (Restopub) ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಮೃತರನ್ನು ಡಾರ್ಜಿಲಿಂಗ್ ಮೂಲದ 26 ವರ್ಷದ ಸಾಹಿನ್ ಮತ್ತು ನೇಪಾಳ ಮೂಲದ 24 ವರ್ಷದ ಪ್ರಕಾಶ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ … Continued

ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಕಾನೂನಾತ್ಮಕ ಸ್ಥಾನಮಾನ, ಸಾಂಸ್ಥಿಕ ರಚನೆ ಹಾಗೂ ಆರ್ಥಿಕ ಮೂಲಗಳನ್ನು ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 100 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸುವುದರ ಜೊತೆಗೆ ಅದರ ಕಾನೂನು ಸ್ಥಿತಿ, ಸಾಂಸ್ಥಿಕ ರಚನೆ, ಹಣಕಾಸಿನ ಮೂಲಗಳು ಮತ್ತು ಭಾರತೀಯ ಕಾನೂನುಗಳ ಅನುಸರಣೆಯ ಬಗ್ಗೆ ಸ್ಪಷ್ಟೀಕರಣವನ್ನು … Continued

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಬ್ರಿಟನ್ ಮಹತ್ವದ ಹೆಜ್ಜೆ: 16 ವರ್ಷದ ಒಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ…!

ಲಂಡನ್ : ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಬ್ರಿಟನ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು (ಸೋಷಿಯಲ್ ಮೀಡಿಯಾ) ಬಳಸುವುದನ್ನು ದೇಶಾದ್ಯಂತ ಸಂಪೂರ್ಣವಾಗಿ ನಿಷೇಧಿಸುವುದಾಗಿ  ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ಘೋಷಿಸಿದ್ದಾರೆ.  ಈಗ ಆಸ್ಟ್ರೇಲಿಯಾ, ಇಂಡೋನೇಷ್ಯಾ ಮತ್ತು ಮಲೇಷ್ಯಾ ನಂತರ ಇಂತಹ ನಿರ್ಬಂಧ ಹೇರಿದ ವಿಶ್ವದ … Continued

ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?

ನವದೆಹಲಿ:ನವದೆಹಲಿ: ಕಳೆದ ವಾರದವರೆಗೆ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳ ಹೊರಗಿನ ಕೆಲವರು ಮಾತ್ರ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI) ಬಗ್ಗೆ ಕೇಳಿದ್ದರು. 2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ಪ್ರಭಾವ ಬೀರಲೂ ವಿಫಲವಾಗಿ, ಅಸ್ತಿತ್ವವೇ ಇಲ್ಲದಂತಾಗಿದ್ದ ಪಶ್ಚಿಮ ಬಂಗಾಳದ ಸಣ್ಣ ರಾಜಕೀಯ ಪಕ್ಷವೊಂದು ಈಗ ದಿಢೀರನೆ ದೇಶದ ಪ್ರಮುಖ ರಾಜಕೀಯ … Continued