ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ನೇಮಕ

ನವದೆಹಲಿ: ಭಾರತೀಯ ಭೂಸೇನೆಯ (ಇಂಡಿಯನ್ ಆರ್ಮಿ) ನೂತನ ಮುಖ್ಯಸ್ಥರಾಗಿ (ಚೀಫ್ ಆಫ್ ದಿ ಆರ್ಮಿ ಸ್ಟಾಫ್) ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಭೂಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30 ರಂದು ನಿವೃತ್ತರಾಗಲಿದ್ದು, ಅದೇ ದಿನದಿಂದ ಜಾರಿಗೆ ಬರುವಂತೆ ಧೀರಜ ಸೇಥ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಭೂಸೇನೆಯ … Continued

ಉಡುಪಿ ಶ್ರೀಕೃಷ್ಣ ಮಠಕ್ಕೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ ಉಡುಪಿಗೆ ಭೇಟಿ ನೀಡಿದ್ದು, ಶ್ರೀ ಕೃಷ್ಣ ಮಠಕ್ಕೆ ತೆರಳಿ ಕಡೆಗೋಲು ಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ … Continued

ಭೀಕರ ದುರಂತ : ಭಾರತೀಯ ವಾಯುಪಡೆಯ AN-32 ವಿಮಾನ ಪತನ ; ಐವರು ಸಿಬ್ಬಂದಿ ಸಾವು

ನವದೆಹಲಿ: ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಶನಿವಾರ ಭಾರತೀಯ ವಾಯುಪಡೆಗೆ (IAF) ಸೇರಿದ AN-32 ಸಾರಿಗೆ ವಿಮಾನವೊಂದು ಪತನಗೊಂಡಿದ್ದು, ಐವರು ವಾಯುಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. “ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ ನಡೆದ AN-32 ಸಾರಿಗೆ ವಿಮಾನ ಅಪಘಾತದಲ್ಲಿ ಐವರು ಭಾರತೀಯ ವಾಯುಪಡೆ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದ ಸಹ-ಪೈಲಟ್ (ಕೋ-ಪೈಲಟ್) … Continued

ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

ಶಹಾಜಹಾನಪುರ (ಉತ್ತರ ಪ್ರದೇಶ): ಭಾರತೀಯ ಸೇನೆಯ ಹಿರಿಯ ಅಧಿಕಾರಿ ‘ಬ್ರಿಗೇಡಿಯರ್’ ಸೋಗಿನಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ 21 ವರ್ಷದ ಯುವಕನೊಬ್ಬ ಕೊನೆಗೂ ಸೇನಾ ಅಧಿಕಾರಿಗಳು ಹೆಣೆದ ತಂತ್ರಕ್ಕೆ ಸಿಲುಕಿ ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಿಲಿಟರಿ ಶೈಲಿಯ ಐಷಾರಾಮಿ ಎಸ್‌ಯುವಿ ಕಾರು, ಬೌನ್ಸರ್‌ಗಳ ಸೆಕ್ಯುರಿಟಿಯೊಂದಿಗೆ ಬಂದಿದ್ದ ಈ ನಕಲಿ ಅಧಿಕಾರಿಯನ್ನು ಉತ್ತರ ಪ್ರದೇಶದ ಶಹಾಜಹಾನಪುರದಲ್ಲಿ ಸೇನೆ ಬಂಧಿಸಿದೆ. ಬಂಧಿತ … Continued

ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಬೆಂಗಳೂರು : ನೈಋತ್ಯ ಮುಂಗಾರು (Monsoon 2026) ಕರ್ನಾಟಕದಾದ್ಯಂತ ಚುರುಕುಗೊಂಡಿದ್ದು, ಜೂ.15ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.  ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ … Continued

ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

ಶಿರಸಿ: ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿಯು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಬಳಿ ನಡೆದಿದೆ ಎಂದು ವರದಿಯಾಗಿದೆ. ಟಾಯ್ಲೆಟ್‌ನಲ್ಲಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹೆದರಿದ ಬಾಲಕಿ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದಿದ್ದಾಳೆ ಎನ್ನಲಾಗಿದ್ದು, ಇದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಹಾಸ್ಟೆಲ್‌ನ … Continued

ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ ‘ಅಟ್-ಹೋಮ್’ ಗೌರವಕ್ಕೆ ಆಯ್ಕೆಯಾದ ಯುವತಿ

ನವದೆಹಲಿ: ಭಾರತದಲ್ಲಿ ಪ್ರತಿವರ್ಷ ಲಕ್ಷಾಂತರ ಯುವಕ-ಯುವತಿಯರು ಸರ್ಕಾರಿ ಉದ್ಯೋಗಗಳಿಗಾಗಿ ಪರೀಕ್ಷೆ ಬರೆಯುತ್ತಾರೆ. ಆದರೆ ಅತ್ಯಂತ ಕಠಿಣವಾದ ಈ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವವರ ಪ್ರಮಾಣ ಶೇಕಡಾ 0.5 ಕ್ಕಿಂತಲೂ ಕಡಿಮೆ. ಇಂತಹ ತೀವ್ರ ಪೈಪೋಟಿಯ ನಡುವೆ, ಛತ್ತೀಸ್‌ಗಢದ ರಾಯ್ಪುರದ 23 ವರ್ಷದ ಯುವತಿ ಚಾರು ಪಾಂಡೆ ಬರೋಬ್ಬರಿ 19 ಸರ್ಕಾರಿ ಉದ್ಯೋಗದ ನೇಮಕಾತಿ ಪರೀಕ್ಷೆಗಳನ್ನು ಪಾಸ್ … Continued

ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಮಾನನಷ್ಟ ಮೊಕದ್ದಮೆಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ಉಲ್ಲೇಖಿಸಿದೆ. ನಿರಂತರ ಕಾನೂನು ಹೋರಾಟದಿಂದ ಇಬ್ಬರೂ ಅಧಿಕಾರಿಗಳು ಪರಸ್ಪರರ ವೃತ್ತಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ. … Continued

ಸ್ಪೇಸ್ ಎಕ್ಸ್ ಷೇರುಗಳ ದಾಖಲೆ ಜಿಗಿತ: ವಿಶ್ವದ ಮೊದಲ ‘ಟ್ರಿಲಿಯನೇರ್’ (ಲಕ್ಷ ಕೋಟಿ ಡಾಲರ್ ಒಡೆಯ)ಆದ ಎಲೋನ್ ಮಸ್ಕ್ !

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿರುವ ಎಲೋನ್ ಮಸ್ಕ್, ಶುಕ್ರವಾರ ಜಾಗತಿಕ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮೈಲಿಗಲ್ಲೊಂದನ್ನು ಸಾಧಿಸಿದ್ದಾರೆ. ಅವರ ಪ್ರಮುಖ ರಾಕೆಟ್ ಸಂಸ್ಥೆಯಾದ ‘ಸ್ಪೇಸ್ ಎಕ್ಸ್’ (SpaceX) ಷೇರು ಮಾರುಕಟ್ಟೆಗೆ ಪದಾರ್ಪಣೆ ಮಾಡಿದ ಮೊದಲ ದಿನವೇ ಭಾರಿ ಯಶಸ್ಸು ಕಂಡಿದ್ದು, ಮಸ್ಕ್ ವಿಶ್ವದ ಮೊದಲ ‘ಟ್ರಿಲಿಯನೇರ್’ (ಲಕ್ಷ ಕೋಟಿ ಡಾಲರ್ ಒಡೆಯ) ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. … Continued

ಅಂತಾರಾಷ್ಟ್ರೀಯ ಕ್ರಿಕೆಟಿಗೆ ದಿಢೀರ್‌ ನಿವೃತ್ತಿ ಘೋಷಿಸಿದ ನ್ಯೂಜಿಲೆಂಡ್‌ನ ಅಪ್ರತಿಮ ಬ್ಯಾಟರ್‌ ಕೇನ್ ವಿಲಿಯಮ್ಸನ್

ಕೇನ್ ವಿಲಿಯಮ್ಸನ್ ಅವರು ಅನಿರೀಕ್ಷಿತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.   ಇಂಗ್ಲೆಂಡ್ ವಿರುದ್ಧದ ಹೈ-ಪ್ರೊಫೈಲ್ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮಧ್ಯದಲ್ಲೇ 35 ವರ್ಷದ ವಿಲಿಯಮ್ಸನ್ ತಮ್ಮದೇ ಶೈಲಿಯಲ್ಲಿ ದಿಢೀರ್ ನಿರ್ಧಾರ ಪ್ರಕಟಿಸಿದ್ದಾರೆ. ಅವರು ತಕ್ಷಣದಿಂದಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮಾದರಿಗಳಿಂದ ದೂರ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ಬ್ಯಾಟಿಂಗ್ ಇತಿಹಾಸವನ್ನು ಹೊಸದಾಗಿ ಬರೆದಿದ್ದ … Continued