ವಿಚಿತ್ರ ಹಳ್ಳಿ : ಇಲ್ಲಿ ಗಂಡಸರು ಮಾತಾಡೋ ಭಾಷೆ ಬೇರೆ…ಹೆಂಗಸರು ಮಾತಾಡೋ ಭಾಷೆ ಬೇರೆ ; ಆದ್ರೂ ಯಾವುದೇ ಸಮಸ್ಯೆ ಇಲ್ಲ !!

ನೈಜೀರಿಯಾ: ಒಂದೇ ಗ್ರಾಮದಲ್ಲಿ ಬೆಳೆದರೂ ಇಲ್ಲಿ ಗಂಸರು ಮತ್ತು ಹೆಂಗಸರು ಒಂದೇ ಭಾಷೆಯ ಎರಡು ವಿಭಿನ್ನ ರೂಪಗಳನ್ನು ಮಾತನಾಡುತ್ತಾರೆ ಎಂದರೆ ಅಚ್ಚರಿಯಾಗಬಹುದು. ದಕ್ಷಿಣ ನೈಜೀರಿಯಾದ ಉಬಾಂಗ್ (Ubang) ಗ್ರಾಮದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಸಾಗಿಬಂದಿರುವ ಈ ವಿಶಿಷ್ಟ ಭಾಷಾ ಸಂಪ್ರದಾಯ ಇದೀಗ ಜಗತ್ತಿನ ಭಾಷಾ ತಜ್ಞರ ಗಮನ ಸೆಳೆದಿದೆ. ಉಬಾಂಗ್ ಗ್ರಾಮದಲ್ಲಿ ಗಂಡಸರು ಮತ್ತು ಹೆಂಗಸರು ದಿನ … Continued

ಇರಾನಿನ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದ ಪರವಾಗಿ ಕೇಂದ್ರ ಸಚಿವೆ ಪಬಿತ್ರಾ, ಬಿಹಾರ ರಾಜ್ಯಪಾಲರು ಭಾಗಿ

ನವದೆಹಲಿ: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ಬಿಹಾರದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಪಬಿತ್ರ ಮಾರ್ಗರಿಟಾ ಭಾಗವಹಿಸಲಿದ್ದಾರೆ ಎಂದು ಸರ್ಕಾರದ ಮೂಲಗಳು ಸೋಮವಾರ ತಿಳಿಸಿವೆ. ಕಳೆದ ವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ … Continued

ಬರ್ತಾರಾ…ಬರೋದಿಲ್ವಾ? ತಂದೆಯ ಅಂತ್ಯಕ್ರಿಯೆಯಲ್ಲಿ ಕಾಣಿಸಿಕೊಳ್ಳುವರೇ ಇರಾನಿನ ನೂತನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ?

ತೆಹ್ರಾನ್ : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಜುಲೈ 9ರಂದು ಪವಿತ್ರ ನಗರ ಮಶ್ಹದ್‌ನಲ್ಲಿರುವ ಇಮಾಮ್ ರೆಜಾ ದರ್ಗಾ ಸಮೀಪ ನಡೆಯಲಿದೆ. ಖಮೇನಿ ಅವರ ನಿಧನವಾಗಿ ನಾಲ್ಕು ತಿಂಗಳಿಗಿಂತ ಹೆಚ್ಚು ಸಮಯ ಕಳೆದ ಬಳಿಕ ಈಗ ಅಂತ್ಯಕ್ರಿಯೆ … Continued

ರಾಮ ಮಂದಿರ ಟ್ರಸ್ಟ್‌ ದೇಣಿಗೆ ದುರ್ಬಳಕೆ ಆರೋಪ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ರಾಮ ಮಂದಿರ ನಿರ್ಮಾಣಕ್ಕಾಗಿ ಬಂದಿರುವ ದೇಣಿಗೆ ಹಣದ ದುರ್ಬಳಕೆ ನಡೆದಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿ ಎಂ.ಎಂ. ಸುಂದರೇಶ ಹಾಗೂ ನ್ಯಾಯಮೂರ್ತಿ … Continued

ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರಿಂದ ‘ಅಪ್ಪಿಕೋ’ ಚಳವಳಿ ; ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವನ್ನು ಮತ್ತಷ್ಟು ತೀವ್ರಗೊಳಿಸಿರುವ ನೂರಾರು ರೈತರು ಭಾನುವಾರ ‘ಅಪ್ಪಿಕೋ’ (ಮರ ಅಪ್ಪಿಕೊಳ್ಳುವ) ಚಳವಳಿಗೆ ಚಾಲನೆ ನೀಡಿದ್ದಾರೆ.  ತಮ್ಮ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಹಾಗೂ ಯೋಜನೆಗಾಗಿ ಮರಗಳನ್ನು ಕಡಿಯಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿರುವ ಅವರು ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ … Continued

ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued

ಕರ್ನಾಟಕದಲ್ಲಿ ಈ ವಾರ ಮಳೆ ಮತ್ತಷ್ಟು ಚುರುಕು ; ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು,  ಯೆಲ್ಲೋ ಅಲರ್ಟ್ ಕೊಡಲಾಗಿದೆ.  ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ … Continued

ಗೋಕರ್ಣ ; ಭಾರಿ ಮಳೆಗೆ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನೀರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾನುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುರಿದ ಧಾರಾಕಾರ ಮಳೆ ಸುರಿದಿದೆ. ವಿಶೇಷವಾಗಿ ಸಿದ್ದಾಪುರ, ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಕುಮಟಾ ತಾಲೂಕಿನ ಗೋಕರ್ಣ ಭಾಗದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೂ ನೀರು ಪ್ರವೇಶಿಸಿದೆ ಎಂದು … Continued

50 ಕೆಜಿ ವಿಷ, 30000 ಖಾಲಿ ಕ್ಯಾಪ್ಸುಲ್‌, ಇರಾನ್ ಪ್ರವಾಸ: ಮೊಹರಂನಲ್ಲಿ ಸಾಮೂಹಿಕ ಹತ್ಯೆ ನಡೆಸಲು ಫಯ್ಯಾಜ್ ಪ್ರೇಂಜಿಯ ಭೀಕರ ಸಂಚು !

ಮುಂಬೈ : ಮುಂಬೈನಲ್ಲಿ ನಡೆದ ಮೊಹರಂ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ಸುಮಾರು 15 ಸಾವಿರ ಜನರನ್ನು ಹತ್ಯೆ ಮಾಡುವ ಉದ್ದೇಶದಿಂದ ವಿಷಕಾರಿ ಕ್ಯಾಪ್ಸುಲ್‌ಗಳನ್ನು ವಿತರಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಫಯ್ಯಾಜ್ ಪ್ರೇಂಜಿ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನೋವು ನಿವಾರಕ ಮಾತ್ರೆಗಳು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಕ್ಯಾಪ್ಸುಲ್‌ಗಳೆಂದು ಬಿಂಬಿಸಿ ಸಾವಿರಾರು ವಿಷಕಾರಿ ಕ್ಯಾಪ್ಸುಲ್‌ಗಳನ್ನು … Continued

“ಈ ವರ್ಷವೇ ನನ್ನ ದೇಶಕ್ಕೆ ಮರಳುತ್ತೇನೆ” ; ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಘೋಷಣೆ

ನವದೆಹಲಿ: ಸುಮಾರು ಎರಡು ವರ್ಷಗಳಿಂದ ಭಾರತದಲ್ಲಿ ದೇಶಾಂತರದ ಜೀವನ ನಡೆಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ, “ಈ ವರ್ಷವೇ ನಾನು ನನ್ನ ದೇಶಕ್ಕೆ ಮರಳುತ್ತೇನೆ” ಎಂದು ಪ್ರಕಟಿಸುವ ಮೂಲಕ ತಮ್ಮ ದೇಶಾಂತರದ ಅಂತ್ಯಕ್ಕೆ ಸೂಚನೆ ನೀಡಿದ್ದಾರೆ. 2024ರ ಆಗಸ್ಟ್ 5ರಂದು ವಿದ್ಯಾರ್ಥಿ ನೇತೃತ್ವದ ಭಾರಿ ಜನಾಂದೋಲನದ ಬಳಿಕ ಅಧಿಕಾರ ಕಳೆದುಕೊಂಡು ಭಾರತಕ್ಕೆ ಬಂದಿದ್ದ ಹಸೀನಾ, … Continued