ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪಿಯು ಕಾಲೇಜುಗಳಿಗೆ ಗುರುವಾರ(ಜುಲೈ 2) ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂಬ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 2ರಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ರಜೆ ಘೋಷಿಸಿದ್ದಾರೆ.

ಹವಾಮಾನದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಸೂಚಿಸಿದ್ದಾರೆ. ಮಕ್ಕಳು ತಗ್ಗು ಪ್ರದೇಶಗಳು, ಕೆರೆಗಳು, ನದಿ ತೀರಗಳು ಅಥವಾ ಸಮುದ್ರ ತೀರದ ಹತ್ತಿರ ಹೋಗದಂತೆ ಎಚ್ಚರವಹಿಸಲು ಪೋಷಕರಿಗೆ ಸಲಹೆ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಇರಬೇಕು. ಯಾವುದೇ ಲೋಪವಿಲ್ಲದಂತೆ ವಿಪತ್ತು ನಿರ್ವಹಣೆ ಕಾರ್ಯ ಕೈಗೊಳ್ಳಬೇಕು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚನೆ ನೀಡಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಎಲ್ಲಾ ತಾಲೂಕುಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲು ಮತ್ತು ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗಿರಲು ನಿರ್ದೇಶನ ನೀಡಲಾಗಿದೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಕನಕಪುರ : ರೈಲ್ವೆ ಬ್ಯಾರಿಕೇಡ್ ನಡುವೆ ಸಿಲುಕಿ ಒದ್ದಾಡಿದ ಕಾಡಾನೆ ; ಸುರಕ್ಷಿತವಾಗಿ ರಕ್ಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement