ಮಾದಾಪಟ್ಟಣ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ ; ಬಂಡೆ ಬಿದ್ದು 7 ಕಾರ್ಮಿಕರು ಸಾವು, ಹಲವರಿಗೆ ಗಾಯ

ಬೆಂಗಳೂರು : ಕಲ್ಲು ಕ್ವಾರಿ ದುರಂತದಲ್ಲಿ 7 ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದ ಬಳಿನಡೆದಿದೆ ಎಂದು ವರದಿಯಾಗಿದೆ. ಕಾವೇರಿ ಜಲ್ಲಿ ಕ್ರಶರ್‌ ಕ್ವಾರಿಯಲ್ಲಿ ಇಂದು, ಗುರುವಾರ ಬೆಳಿಗ್ಗೆ 7:30ರ ಸುಮಾರಿಗೆ ಈ ದುರಂತ ನಡೆದಿದೆ ಎಂದು ವರದಿಯಾಗಿದೆ.
ಕ್ವಾರಿಯಲ್ಲಿ ಕಾರ್ಮಿಕರು ಕೆಲಸ ಮಾಡಲು ಸಿದ್ಧರಾಗುತ್ತಿದ್ದಾಗ ಸುಮಾರು 100 ಅಡಿ ಮೇಲಿನಿಂದ ಕಲ್ಲು ಬಂಡೆಗಳು ಕೆಳಗೆ ಉರುಳಿವೆ. ಹಿಟಾಚಿ ಹಿಟಾಚಿಯಲ್ಲಿಕೆಲಸ ಮಾಡುವಾಗ ದೊಡ್ಡ ಬಂಡೆ ಕೂಲಿ ಕಾರ್ಮಿಕರ ಮೇಲೆ ಬಂಡೆ ಬಿದ್ದು ಅವರೆಲ್ಲ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ.

ವರದಿಗಳ ಪ್ರಕಾರ, ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆಗಳು ಕೆಳಗೆ ಉರುಳಿ ಈ ಭಾರೀ ಅನಾಹುತ ನಡೆದಿದೆ. ಈ ವೇಳೆ ಕ್ವಾರಿಯಲ್ಲಿ ಸುಮಾರು 10 ರಿಂದ 15 ಮಂದಿ ಹೊರ ರಾಜ್ಯದ ಕಾರ್ಮಿಕರು ಹಾಗೂ 2 ರಿಂದ 3 ಮಂದಿ ಸ್ಥಳೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಿಟಾಚಿ ಯಂತ್ರದ ಮೂಲಕ ಕಾಮಗಾರಿ ನಡೆಯುತ್ತಿದ್ದಾಗ ಏಕಾಏಕಿ ಬಂಡೆ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ 5 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಕಲ್ಲುಗಳನ್ನು ಸ್ಫೋಟಿಸಿರುವ ಶಂಕೆಯೂ ವ್ಯಕ್ತವಾಗಿದೆ. ಆದರೆ ದುರಂತಕ್ಕೆ ನಿಖರ ಕಾರಣವೇನು ಎಂಬುದು ಪರಿಶೀಲನೆಯ ನಂತರ ತಿಳಿಯಲಿದೆ.

ಪ್ರಮುಖ ಸುದ್ದಿ :-   ಜುಲೈ 2ಕ್ಕೆ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಸಿಎಂ ಶಿವಕುಮಾರ ಸಂತಾಪ
ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಪಟ್ಟಣ ಗ್ರಾಮದ ಬಳಿ ದುರಂತ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಂತಾಪ ಸೂಚಿಸಿದ್ದಾರೆ. ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.
ಅಲ್ಲದೆ, ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement