ಹುಬ್ಬಳ್ಳಿ : ಒಳಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

ಹುಬ್ಬಳ್ಳಿ: ಒಳಚರಂಡಿ ಕಾಮಗಾರಿ ವೇಳೆ ಗೋಡೆ ಮಣ್ಣು ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಗುಜರಾತ್ ಭವನದ ಸಮೀಪ ಇರುವ ಕೃಷ್ಣಾ ನಗರದಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ.
ಮಲ್ಲಪ್ಪ ಜೋಗಿ (30) ಮೃತ ಕಾರ್ಮಿಕನಾಗಿದ್ದು, ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮಹಾನಗರ ಪಾಲಿಕೆಯಿಂದ ಗುತ್ತಿಗೆ ಪಡೆದು ನಡೆಸುತ್ತಿದ್ದ ಕಾಮಗಾರಿ ವೇಳೆ ದುರಂತ ಸಂಭವಿಸಿದೆ. ಜೆಸಿಬಿಯಿಂದ ತಗ್ಗು ತೋಡಿದ ಸ್ಥಳದಲ್ಲಿ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಗೋಡೆ ಹಾಗೂ ಮಣ್ಣು ಕುಸಿದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣದ ದಾಖಲಿಸಿಕೊಂಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾದಾಪಟ್ಟಣ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ ; ಬಂಡೆ ಬಿದ್ದು 7 ಕಾರ್ಮಿಕರು ಸಾವು, ಹಲವರಿಗೆ ಗಾಯ

ನಿಮ್ಮ ಕಾಮೆಂಟ್ ಬರೆಯಿರಿ

advertisement