ಮುಂಗಾರು ಕೊರತೆ : ಡ್ಯಾಂನಲ್ಲಿ ನೀರಿಲ್ಲ ; ಇದರ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ; ಸಿಎಂ ಶಿವಕುಮಾರ

ಬೆಂಗಳೂರು: ಈ ವರ್ಷ ದೇಶದಲ್ಲಿ ತೀವ್ರ ಮಳೆ ಕೊರತೆ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುವುದುಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ರೈತರಿಗೆ ಸಲಹೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ಅಣೆಕಟ್ಟುಗಳು ಸಂಪೂರ್ಣವಾಗಿ ಭರ್ತಿಯಾಗುವವರೆಗೂ ರೈತರು ಅವುಗಳನ್ನೇ ಅವಲಂಬಿಸುವುದು ಬೇಡ. ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಅಣೆಕಟ್ಟುಗಳಲ್ಲಿ ಒಳಹರಿವಿನ ಪ್ರಮಾಣ ಶೇ.20ರಷ್ಟಕ್ಕೆ ಕುಸಿದಿದೆ. ಹಲವಾರು ಅಣೆಕಟ್ಟುಗಳ ಒಳಹರಿವಿನ ಪ್ರಮಾಣ ಶೂನ್ಯಕ್ಕೆ ತಲುಪಿದೆ. ಕಾವೇರಿ ಪಾತ್ರದಲ್ಲಿ ಮಳೆ ಪ್ರಮಾಣ ಕುಸಿದಿದೆ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಈ ಸಮಯದಲ್ಲಿ ಹೇಮಾವತಿ ಜಲಾಶಯದಲ್ಲಿ 80 ಅಡಿ ನೀರಿತ್ತು. ಈ ವರ್ಷ 40 ಅಡಿಗೆ ಕುಸಿದಿದೆ. ಕೆಆರ್ ಎಸ್ ನಲ್ಲಿ 100 ಅಡಿ ಇದ್ದ ನೀರಿನ ಪ್ರಮಾಣ ಈಗ 22 ಅಡಿಯಷ್ಟಿದೆ. ಕಬಿನಿಯಲ್ಲಿ 79 ಅಡಿ ಇತ್ತು. ಈಗ 26 ಅಡಿಯಷ್ಟಿದೆ. ಹೀಗಾಗಿ ಪರಿಸ್ಥಿತಿ ಇದೇರೀತಿ ಮುಂದುವರಿದರೆ ಸಮಸ್ಯೆ ಬಿಗಡಾಯಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಈಗಿನ ಪರಿಸ್ಥಿತಿಯಲ್ಲಿ ನೀರು ಬಿಡುವ ವಿಚಾರದಲ್ಲಿ ರೈತರು ಒತ್ತಡ ಹಾಕಬಾರದು. ಮುಂದಿನ ದಿನಗಳಲ್ಲಿ ಮಳೆ ಗಮನದಲ್ಲಿಟ್ಟುಕೊಂಡು ಬೆಳೆ ಹಾಕಬೇಕು. ಮಳೆ ಬಂದರೆ ನಾವು ನೀರನ್ನು ಪೂರೈಸುತ್ತೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಅಂಕೋಲಾ: ಖಾಸಗಿ ಬಸ್ ಪಲ್ಟಿ, ಹಲವು ಪ್ರಯಾಣಿಕರಿಗೆ ಗಾಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement