ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ.
ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 8ಕ್ಕೆ ರಜೆ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement