ಕರ್ನಾಟಕದ ಆರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಬುಧವಾರ (ಜುಲೈ ೮) ರೆಡ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಬುಧವಾರ ರೆಡ್ ಅಲರ್ಟ್ ನೀಡಲಾಗಿದೆ.
ಭಾರೀ ಮಳೆಯ ಮುನ್ನೆಚ್ಚರಿಕೆಯಾಗಿ ದಕ್ಷಿಣ ಕನ್ನಡ,  ಬೆಳಗಾವಿ ಮತ್ತು ಕೊಡಗು ಸೇರಿದಂತೆ ಮಳೆಯ ತೀವ್ರತೆ ಹೆಚ್ಚಿರುವ ತಾಲ್ಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಆರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ 204. 4 ಮಿ.ಮೀ ಮಳೆಯಾಗುವ ಸೂಚನೆಯಿದ್ದು, ಗಾಳಿಯ ವೇಗವು ಗಂಟೆಗೆ 50 ರಿಂದ 60 ಕಿ. ಮೀ ಇರಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಇದಲ್ಲದೇ ಜುಲೈ 11ರವರೆಗೆ ರಾಜ್ಯದ ಘಟ್ಟ ಪ್ರದೇಶದ ಒಂದು ಅಥವಾ ಎರಡು ಕಡೆಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯೂ ಇದೆ ಎಂದು ತಿಳಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement