ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 8ಕ್ಕೆ ರಜೆ ಘೋಷಣೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಬುಧವಾರ (ಜುಲೈ 8) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ ಎಚ್.ವಿ. ತಿಳಿಸಿದ್ದಾರೆ.
ದ.ಕ ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಆರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement