ಬೆಂಗಳೂರು: ಹವಾಮಾನ ಇಲಾಖೆಯು ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಅಲ್ಲದೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹೇಳಿದೆ.


ನಿಮ್ಮ ಕಾಮೆಂಟ್ ಬರೆಯಿರಿ