ಶಿರಸಿ : ವಾಹನ ಡಿಕ್ಕಿ ; ಕಾನಕುರಿ ಸಾವು

ಶಿರಸಿ: ಶಿರಸಿ-ಕುಮಟಾ ರಸ್ತೆಯ ಸಿರ್ಸಿಮಕ್ಕಿ ಸಮೀಪ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಾನಕುರಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಭಾನುವಾರ ನಡೆದಿದೆ.
ಸಿರಸಿಮಕ್ಕಿಯ ಸಮೀಪದ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಈ ಸಂಭವಿಸಿದ್ದು, ಕಾಡಿನಿಂದ ಬಂದ ಕಾನಕುರಿ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ವೇಗವಾಗಿ ಡಿಕ್ಕಿ ಹೊಡೆದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾನಕುರಿ ಅಲ್ಲಿಯೇ ಪ್ರಾಣಬಿಟ್ಟಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರದೇಶವು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಕಾಡು ಪ್ರಾಣಿಗಳು ರಸ್ತೆ ದಾಟುತ್ತಿರುತ್ತವೆ. ಆದ್ದರಿಂದ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಡಿಯೊ | ಮುರುಡೇಶ್ವರ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿ

ನಿಮ್ಮ ಕಾಮೆಂಟ್ ಬರೆಯಿರಿ

advertisement