ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು

ದಾವಣಗೆರೆ : ಪೋಕ್ಸೋ ಪ್ರಕರಣದಲ್ಲಿ​ ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ವಿಶೇಷ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ಕೋರ್ಟ್ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅವರು, ಕೆಲವು ಷರತ್ತುಬದ್ಧ‌ ಜಾಮೀನು ಮಂಜೂರು ಮಾಡಿದ್ದಾರೆ.
ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂನ್‌ 25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜೂನ್​ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​ಗೆ ವಚನಾನಂದ ಶ್ರೀಗಳು ಅರ್ಜಿ ಸಲ್ಲಿಸಿದ್ದರು. ಎರಡು ಕಡೆಯವರ ವಾದವನ್ನು ಈಗಾಗಲೇ ಆಲಿಸಿದ್ದ ನ್ಯಾಯಾಲಯವು ಶ್ರೀಗಳಿಗೆ ರೆಗ್ಯುಲರ್ ಬೇಲ್ ನೀಡಿದೆ. ವಚನಾನಂದಶ್ರೀ ಪರ ವಕೀಲ ಎಸ್.ವಿ.ಪಾಟೀಲ ಅವರು ವಾದ ಮಂಡನೆ ಮಾಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement