ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ : ಗುರುವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ–ತದಡಿ ರಸ್ತೆಯ ಬದಿಯ ಗುಡ್ಡ ಕುಸಿದಿದ್ದು, ರಸ್ತೆ ಸಂಚಾ ಸದ್ಯಕ್ಕೆ ಸ್ಥಗಿತಗೊಂಡಿದೆ.
ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಕಲ್ಲುಗಳು ಬಿದ್ದಿದ್ದರಿಂದ ಸುರಕ್ಷತಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಮೇಲಿನ ಮಣ್ಣು ತೆರವುಗೊಳಿಸಿ ಸಂಚಾರವನ್ನು ಪುನರಾರಂಭಿಸಲು ಪ್ರಯತ್ನಗಳು ನಡೆದಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಗುಡ್ಡ ಕುಸಿತದ ಅಪಾಯ ಹೆಚ್ಚಾಗಿದ್ದು, ಗುಡ್ಡ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಈ ಮಾರ್ಗ ಬಳಸುವ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement