ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

ಹಾಸನ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಪಕ್ಷಾತೀತವಾಗಿ ಹಿರಿಯ ನಾಯಕರು ಅಂತಿಮ ನಮನ ಸಲ್ಲಿಸಲು ಮಾವಿನಕೆರೆಯಲ್ಲಿ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಚೆನ್ನಮ್ಮ ಅವರ ಕಿರಿಯ ಪುತ್ರ ಎಚ್‌.ಡಿ.ರಮೇಶ್‌ ಅಂತಿಮ ವಿಧಿವಿಧಾನ ನೆರವೇರಿಸಿದರು.
ಚೆನ್ನಮ್ಮ ಅವರು ದೀರ್ಘಕಾಲ ಹೊಳೆನರಸೀಪುರ ಭಾಗದಲ್ಲೇ ಇದ್ದವರು. ಹರದನಹಳ್ಳಿಯು ದೇವೇಗೌಡರ ತವರೂರು ಮತ್ತು ಚೆನ್ನಮ್ಮನವರು ಪತಿಯೊಂದಿಗೆ ಬೇರು ಹೊಂದಿದ ಸ್ಥಳವಾಗಿದೆ. ಅವರ ಒಡೆತನದ 32 ಎಕರೆ ವಿಶಾಲವಾದ ಕೃಷಿ ಜಮೀನು ಬೆಟ್ಟದ ತಪ್ಪಲಿನಲ್ಲಿದೆ. ಮಾವಿನಕೆರೆ ರಂಗನಾಥಸ್ವಾಮಿ ಬಗ್ಗೆ ಚೆನ್ನಮ್ಮನವರಿಗೆ ಅಪಾರವಾದ ಭಕ್ತಿ. ಹೀಗಾಗಿ ಇದೇ ಸ್ಥಳದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಅಂತ್ಯ ಸಂಸ್ಕಾರದ ಅಂತಿಮ ವಿಧಿ ವಿಧಾನಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕೇಂದ್ರ ಸಚಿವರಾದ ಸಚಿವ ಶಿವರಾಜ ಸಿಂಗ್ ಚೌಹಾಣ, ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಕೃಷ್ಣ ಬೈರೇಗೌಡ, ಕೆ.ಜೆ.ಜಾರ್ಜ್‌, ಕೆ.ಎಚ್‌.ಮುನಿಯಪ್ಪ, ವಿಪಕ್ಷ ನಾಯಕ ಆರ್‌.ಅಶೋಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಿಜಿ-ಐಜಿಪಿ ಎಂ.ಎ.ಸಲೀಂ, ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ರಂಭಾಪುರಿ ಶ್ರೀಗಳು, ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ ಸೇರಿ ವಿವಿಧ ಗಣ್ಯರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಷ್ಟ್ರಧ್ವಜವನ್ನು ಎಚ್‌.ಡಿ.ದೇವೇಗೌರಿಗೆ ಹಸ್ತಾಂತರಿಸಿ, ಗೌರವ ಸಲ್ಲಿಸಿದರು. ಅಂತಿಮ ದರ್ಶನದ ವೇಳೆ ದೇವೇಗೌಡರು ಸೇರಿ ಕುಟುಂಬಸ್ಥರು ಭಾವುಕರಾದರು. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಎಚ್‌.ಡಿ. ರೇವಣ್ಣ ಅವರು ತಾಯಿಯ ಮೃತ ಶರೀರದ ಮುಂದೆ ಕಣ್ಣೀರಿಟ್ಟರು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರ ಜೊತೆಗೆ ಅಂತಿಮ ನಮನ ಸಲ್ಲಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement